(ತಾಳಿಕೋಟಿ) ವಿಜಯಪುರ: ಹಾಡಹಗಲೇ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರ ಚಿನ್ನದ ಸರ ಎಗರಿಸಿ ಕಳ್ಳನೊಬ್ಬ ಪರಾರಿಯಾಗಿರುವ ಘಟನೆ ಸೆ.1 ರಂದು ತಾಳಿಕೋಟಿಯಲ್ಲಿ ನಡೆದಿದೆ.
VIDEO; ಹಾಡಹಗಲೇ ಬಸ್ ನಿಲ್ದಾಣದಲ್ಲಿ ಚಿನ್ನದ ಸರ ಎಗರಿಸಿದ ಖದೀಮ - women Gold chain escape news
ತಾಳಿಕೋಟಿ ಬಸ್ ನಿಲ್ದಾಣದಲ್ಲಿ ಹಾಡಹಗಲೇ ಕಳ್ಳನೊಬ್ಬ ಮಹಿಳೆಯ ಚಿನ್ನದ ಸರ ಎಗರಿಸಿ ಪರಾರಿಯಾದ ಘಟನೆ ನಡೆದಿದೆ.
ಬಸ್ ನಿಲ್ದಾಣದಲ್ಲಿ ಮಹಿಳೆಯ ಚಿನ್ನದ ಸರ ಎಗರಿಸಿದ ಕಳ್ಳ
ಹತ್ತು ನಿಮಿಷಕ್ಕೂ ಅಧಿಕ ಕಾಲ ನಿಲ್ದಾಣದಲ್ಲೇ ಒಂದೇ ಕಡೆ ನಿಂತಿದ್ದ ಕಳ್ಳ, ಮಹಿಳೆ ಮೊಬೈಲ್ ವೀಕ್ಷಣೆಯಲ್ಲಿ ನಿರತವಾಗಿರುವುದನ್ನು ಗಮನಿಸಿ ಈ ಕೃತ್ಯ ಎಸಗಿದ್ದಾನೆ. ಈ ದೃಶ್ಯ ತಾಳಿಕೋಟಿ ಬಸ್ ನಿಲ್ದಾಣದ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಸರ ಕಳೆದುಕೊಂಡ ಮಹಿಳೆ ನೀರಲಗಿ ಗ್ರಾಮದವರು ಎಂದು ತಿಳಿದು ಬಂದಿದ್ದು, ತಾಳಿಕೋಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Last Updated : Sep 3, 2021, 11:27 PM IST