ವಿಜಯಪುರ: ಜಿಲ್ಲೆಯ ಸಿಂದಗಿ ವಿಧಾನಸಭೆ ಉಪಚುನಾವಣೆಗೆ ಸಂಬಂಧಪಟ್ಟಂತೆ ಚುನಾವಣಾ ಕಾರ್ಯಕ್ಕೆ ನೇಮಿಸಿದ ಮೂವರು ಅಧಿಕಾರಿಗಳು ಕರ್ತವ್ಯ ಲೋಪವೆಸಗಿದ ಹಿನ್ನೆಲೆ ಅವರನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಪಿ.ಸುನಿಲ್‌ಕುಮಾರ್ ಆದೇಶ ಹೊರಡಿಸಿದ್ದಾರೆ.
ಕರ್ತವ್ಯಲೋಪ : ವಿಜಯಪುರದಲ್ಲಿ ಮೂವರು ಶಿಕ್ಷಕರ ಅಮಾನತು - three teachers suspened in vijaypura
ಅಮಾನತುಗೊಂಡ ನೌಕರರು ಈ ಅವಧಿಯಲ್ಲಿ ಮೇಲಾಧಿಕಾರಿಗಳ ಅನುಮತಿ ಇಲ್ಲದೆ ಕೇಂದ್ರ ಸ್ಥಾನ ಬಿಡತಕ್ಕದ್ದಲ್ಲ ಎಂದು ಆದೇಶವಿದ್ದರೂ ಈ ನಿಯಮ ಉಲ್ಲಂಘಿಸಿದ್ದರು. ಈ ಆದೇಶವು ತಕ್ಷಣದಿಂದ ಜಾರಿಗೆ ಬಂದಿದೆ. ಕ್ಷೇತ್ರ ಶಿಕ್ಷಣಾಧಿಕಾರಿಗಳು ಈ ನೌಕರರನ್ನು ಕರ್ತವ್ಯದಿಂದ ಇಂದೇ ಬಿಡುಗಡೆ ಮಾಡಿ ವರದಿ ಸಲ್ಲಿಸಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ..
ಸಿಂದಗಿಯ ವಿದ್ಯಾನಗರದ ಪ್ರಾಥಮಿಕ ಶಾಲೆಯ ಶಿಕ್ಷಕರಾದ ವಿ ವಿ ನಿಂಬರ್ಗಿ, ಎಸ್ ಆರ್ ಸಿಂದಗಿ ಹಾಗೂ ಆರ್ ಎ ಕಠಾರೆ ಇವರನ್ನು ಅಮಾನತುಗೊಳಿಸಲಾಗಿದೆ. ಇವರ ವಿರುದ್ಧ ಇಲಾಖಾ ವಿಚಾರಣೆ ಬಾಕಿ ಇರಿಸಿ, ಸೇವೆಯಿಂದ ಅಮಾನತುಗೊಳಿಸಿ ಆದೇಶಿಸಿದ್ದಾರೆ.
ಅಮಾನತುಗೊಂಡ ನೌಕರರು ಈ ಅವಧಿಯಲ್ಲಿ ಮೇಲಾಧಿಕಾರಿಗಳ ಅನುಮತಿ ಇಲ್ಲದೆ ಕೇಂದ್ರ ಸ್ಥಾನ ಬಿಡತಕ್ಕದ್ದಲ್ಲ ಎಂದು ಆದೇಶವಿದ್ದರೂ ಈ ನಿಯಮ ಉಲ್ಲಂಘಿಸಿದ್ದರು. ಈ ಆದೇಶವು ತಕ್ಷಣದಿಂದ ಜಾರಿಗೆ ಬಂದಿದೆ. ಕ್ಷೇತ್ರ ಶಿಕ್ಷಣಾಧಿಕಾರಿಗಳು ಈ ನೌಕರರನ್ನು ಕರ್ತವ್ಯದಿಂದ ಇಂದೇ ಬಿಡುಗಡೆ ಮಾಡಿ ವರದಿ ಸಲ್ಲಿಸಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ.