ವಿಜಯಪುರ :ನಗರದ ಅಮರ್ ಇಂಟರ್ ನ್ಯಾಷನಲ್ ಹೋಟೆಲ್‌ನಲ್ಲಿ ಸೆಪ್ಟಿಕ್ ಟ್ಯಾಂಕ್ ಕ್ಲೀನ್ ಮಾಡುವ ವೇಳೆ ಈ ದುರಂತ ಸಂಭವಿಸಿದೆ.
ಹೋಟೆಲ್ ಸೆಪ್ಟಿಕ್ ಟ್ಯಾಂಕ್ನಲ್ಲಿ ಉಸಿರುಗಟ್ಟಿ ಮೂವರು ಕಾರ್ಮಿಕರ ಸಾವು - kannada news
ಹೋಟೆಲ್ ಸೆಪ್ಟಿಕ್ ಟ್ಯಾಂಕ್ ಕ್ಲೀನ್ ಮಾಡುವ ವೇಳೆ ಆಮ್ಲಜನಕದ ಕೊರತೆಯುಂಟಾಗಿ ಮೂವರು ಕಾರ್ಮಿಕರು ಸಾವನ್ನಪ್ಪಿದ ಘಟನೆ ವಿಜಯಪುರದಲ್ಲಿ ನಡೆದಿದೆ.
ಹೊಟೇಲ್ ಸೆಪ್ಟಿಕ್ ಟ್ಯಾಂಕ್ನಲ್ಲಿ ಉಸಿರುಗಟ್ಟಿ ಮೂವರು ಕಾರ್ಮಿಕರ ಸಾವು
ಟ್ಯಾಂಕ್ ಸ್ವಚ್ಛಗೊಳಿಸಲು ಒಳಗಡೆ ಕಾರ್ಮಿಕರು ಇಳಿದಿದ್ದರು. ಆದರೆ, ಆಮ್ಲಜನಕದ ಕೊರತೆಯಿಂದ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಮುದಕಪ್ಪ ಕಟ್ಟಮನಿ ( 35), ನಬೀಸಾಬ್ ಎಕ್ಕೆವಾಡಿ ( 26 ), ಗೂಡುಸಾಬ್ ಭಾಗವಾನ್ ( 45) ಮೃತ ದುರ್ದೈವಿಗಳು.
ಸುದ್ದಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ಟ್ಯಾಂಕ್‌ನಿಂದ ಕಾರ್ಮಿಕರ ಶವಗಳನ್ನ ಹೊರ ತೆಗೆದಿದ್ದಾರೆ. ಇಂಡಿ ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ದುರಂತ ಸಂಭವಿಸಿದೆ.