ಕರ್ನಾಟಕ

karnataka

ETV Bharat / state

ಪಾಲಿಕೆ ಚುನಾವಣೆ ತಡೆಯಾಜ್ಞೆಗೆ ಅರ್ಜಿ ವಜಾ, ದೂರುದಾರರು ಹೇಳಿದ್ದೇನು? - ಈಟಿವಿ ಭಾರತ ಕನ್ನಡ

ವಿಜಯಪುರ ಮಹಾನಗರ ಪಾಲಿಕೆ ಚುನಾವಣೆಗೆ ಇಂದು 36 ನಾಮಪತ್ರ ಸಲ್ಲಿಕೆಯಾಗಿದ್ದು, ಅ.17ರಂದು ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿದೆ.

Kn_vjp_
ವಿಜಯಪುರ ಮಹಾನಗರ ಪಾಲಿಕೆ

By

Published : Oct 14, 2022, 7:57 PM IST

ವಿಜಯಪುರ: ಸ್ಥಳೀಯ ಮಹಾನಗರ ಪಾಲಿಕೆ ಚುನಾವಣೆಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಕಾಂಗ್ರೆಸ್​ ಸಲ್ಲಿಸಿದ್ದ ಅರ್ಜಿಯನ್ನು ಕಲಬುರ್ಗಿ ವಿಭಾಗೀಯ ಹೈಕೋರ್ಟ್ ಪೀಠ ವಜಾ ಮಾಡಿದ್ದು, ತಾವು ನ್ಯಾಯಾಲಯದ ತೀರ್ಪಿಗೆ ತಲೆಬಾಗುವೆ ಎಂದು ಕಾಂಗ್ರೆಸ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ವಿದ್ಯಾರಾಣಿ ತುಂಗಳ ಹೇಳಿದ್ದಾರೆ.

ಹೈಕೋರ್ಟ್ ತೀರ್ಪು ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ಶೇ. 50ರಷ್ಟು ಮಹಿಳಾ ಮೀಸಲಾತಿ ವಾರ್ಡ್​ಗಳ ವಿಂಗಡಣೆ ಸರಿಯಾಗಿಲ್ಲ ಎಂದು ಕಲಬುರ್ಗಿ ಹೈಕೋರ್ಟ್​ಗೆ ರಿಟ್ ಪೀಟಿಷನ್ ಸಲ್ಲಿಸಿದ್ದೆ, ಆದರೆ ನ್ಯಾಯಾಲಯ ಅರ್ಜಿಯನ್ನು ವಜಾ ಮಾಡಿದೆ. ನ್ಯಾಯಾಲಯದ ತೀರ್ಪನ್ನು ಎಲ್ಲರೂ ಗೌರವಿಸಬೇಕು ಎಂದರು.

ಕಾಂಗ್ರೆಸ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ವಿದ್ಯಾರಾಣಿ ತುಂಗಳ ಪ್ರತಿಕ್ರಿಯೆ

ಆದರೆ, ಸರ್ಕಾರ ಮಾತ್ರ ಅಧಿಕಾರಿವನ್ನು ದುರುಪಯೋಗ ಪಡಿಸಿಕೊಂಡಿದೆ ಎಂದು ಆರೋಪಿಸಿದರು. ಅಲ್ಲದೇ, ಕಾಂಗ್ರೆಸ್ ನಾಯಕರು, ಮುಖಂಡರೊಂದಿಗೆ ಚರ್ಚೆ ಮಾಡುತ್ತೇವೆ. 35 ವಾರ್ಡ್‌ಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನ ಕಣಕ್ಕಿಳಿಸಿ, ಅಭ್ಯರ್ಥಿಗಳ ಗೆಲುವಿಗೆ ಶ್ರಮ ವಹಿಸುತ್ತೇವೆ ಎಂದರು.

36 ನಾಮಪತ್ರ ಸಲ್ಲಿಕೆ:ಮಹಾನಗರ ಪಾಲಿಕೆ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಸೋಮವಾರ ಕೊನೆ ದಿನವಾಗಿದ್ದು, ಮೊದಲು‌‌ ನಾಲ್ಕು ದಿನ ಕೇವಲ ಎರಡು ನಾಮಪತ್ರ ಸಲ್ಲಿಕೆಯಾಗಿದ್ದವು. ಇಂದು ಶುಕ್ರವಾರವಾದ ಕಾರಣ ಇಂದು ಒಂದೇ ದಿನ 36ನಾಮಪತ್ರ ಸಲ್ಲಿಕೆಯಾಗಿವೆ. ಬಿಜೆಪಿಯಿಂದ 14, ಕಾಂಗ್ರೆಸ್ 8, ಜೆಡಿಎಸ್ 1 ಹಾಗೂ ಪಕ್ಷೇತರ 13 ಸೇರಿ ಒಟ್ಟು 36 ನಾಮಪತ್ರ ಸಲ್ಲಿಕೆಯಾಗಿವೆ. ಒಟ್ಟು 35ವಾರ್ಡ್ ಗಳ ಪೈಕಿ 14ವಾರ್ಡ್​ಗಳಿಂದ ಇಲ್ಲಿಯವರೆಗೆ ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ. ಅ.17ರಂದು ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿದೆ.

ಇದನ್ನೂ ಓದಿ:ಮಹಾನಗರ ಪಾಲಿಕೆ ಚುನಾವಣೆ : ಬಿಜೆಪಿಯಲ್ಲಿ ಒಗ್ಗಟ್ಟಿನ ಮಂತ್ರ

ABOUT THE AUTHOR

...view details