ಬಾಗಲಕೋಟೆ:ಜಿಲ್ಲೆಯಲ್ಲಿ ಇಂದು 185 ಜನ ಕೋವಿಡ್‍ನಿಂದ ಗುಣಮುಖರಾಗಿ ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಿಂದ ಬಿಡುಗಡೆ ಆಗಿದ್ದು, ಹೊಸದಾಗಿ 114 ಕೊರೊನಾ ಪ್ರಕರಣ ದೃಢಪಟ್ಟಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 12,758 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 11,757 ಜನ ಕೋವಿಡ್‍ನಿಂದ ಗುಣಮುಖರಾಗಿದ್ದಾರೆ. ಬಾಗಲಕೋಟೆ ತಾಲೂಕಿನಲ್ಲಿ 69, ಬಾದಾಮಿ 7, ಬೀಳಗಿ 5, ಹುನಗುಂದ 5, ಮುಧೋಳ 13, ಜಮಖಂಡಿ 15 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಅವರನ್ನು ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಜಿಲ್ಲಾ ಕೋವಿಡ್ ಲ್ಯಾಬ್‌ನಲ್ಲಿ ಪರೀಕ್ಷಿಸಲಾಗುತ್ತಿದ್ದ 1303 ಸ್ಯಾಂಪಲ್‍ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಈವರೆಗೆ ಒಟ್ಟು 1,41,187 ಸ್ಯಾಂಪಲ್‍ಗಳನ್ನು ಪರೀಕ್ಷಿಸಲಾಗಿದ್ದು, ಈ ಪೈಕಿ 12,6615 ನೆಗಟಿವ್ ಪ್ರಕರಣ ಹಾಗೂ 128 ಮೃತ ಪ್ರಕರಣ ವರದಿಯಾಗಿರುತ್ತದೆ. ಇನ್ನು 873 ಮಾತ್ರ ಸಕ್ರಿಯ ಪ್ರಕರಣಗಳು ಇವೆ. ಇಲ್ಲಿವರೆಗೆ ಒಟ್ಟು 413 ಸ್ಯಾಂಪಲ್‍ಗಳು ಮಾತ್ರ ರಿಜೆಕ್ಟ್ ಆಗಿರುತ್ತವೆ.