ಕರ್ನಾಟಕ

karnataka

ETV Bharat / state

ವಿಜಯಪುರ : ಈವರೆಗೆ 176 ಬ್ಲ್ಯಾಕ್ ಫಂಗಸ್ ಪ್ರಕರಣ ಪತ್ತೆ.. 92 ಮಂದಿ ಗುಣಮುಖ - dc p sunila kumara

ಈವರೆಗೆ ಬ್ಲ್ಯಾಕ್ ಫಂಗಸ್​ಗೆ ಇಬ್ಬರು ಬಲಿಯಾಗಿದ್ದಾರೆ. ಉಳಿದ 92 ರೋಗಿಗಳು ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ..

black fungus cases
ಬ್ಲ್ಯಾಕ್ ಫಂಗಸ್ ಪ್ರಕರಣಗಳು

By

Published : Jun 18, 2021, 5:48 PM IST

ವಿಜಯಪುರ :ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್ ಪ್ರಕರಣಗಳು ಹೆಚ್ಚುತ್ತಲೇ ಇವೆ. 176 ಜನರಲ್ಲಿ ಈ ಸೋಂಕು ಕಾಣಿಸಿಕೊಂಡಿದೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲ್‌ಕುಮಾರ್ ತಿಳಿಸಿದ್ದಾರೆ.

ಕಪ್ಪು ಶಿಲೀಂದ್ರಕ ರೋಗದ ಕುರಿತಂತೆ ಜಿಲ್ಲಾಧಿಕಾರಿ ಪಿ. ಸುನೀಲ್‌ಕುಮಾರ್‌ ಮಾಹಿತಿ..

ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು, 176 ರೋಗಿಗಳ ಪೈಕಿ ಸದ್ಯ 82 ರೋಗಿಗಳು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.‌ ಈವರೆಗೆ ಬ್ಲ್ಯಾಕ್ ಫಂಗಸ್​ಗೆ ಇಬ್ಬರು ಬಲಿಯಾಗಿದ್ದಾರೆ. ಉಳಿದ 92 ರೋಗಿಗಳು ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದರು.

ಒಟ್ಟು 176 ರೋಗಿಗಳ ಪೈಕಿ ಕೆಲ ರೋಗಿಗಳು ಚಿಕಿತ್ಸೆಗಾಗಿ ಬೇರೆ ಬೇರೆ ಜಿಲ್ಲೆಗೂ ಸಹ ಹೋಗಿದ್ದಾರೆ. ಸದ್ಯ ಜಿಲ್ಲೆಯ ವಿವಿಧ ಆಸ್ಪತ್ರೆಯಲ್ಲಿ 82 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದರು.

ABOUT THE AUTHOR

...view details