ಮುದ್ದೇಬಿಹಾಳ: ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷರೊಬ್ಬರು ನಾಡ ಕೋವಿಯಿಂದ ಗಾಳಿಯಲ್ಲಿ ಗುಂಡು ಹಾರಿಸಿದ ಘಟನೆ ತಾಲೂಕಿನ ಬಸರಕೋಡ ಗ್ರಾಮದಲ್ಲಿ ಗುರುವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಬಸರಕೋಡದ ತಾ.ಪಂ ಮಾಜಿ ಉಪಾಧ್ಯಕ್ಷ ಮಂಜುನಾಥಗೌಡ ಪಾಟೀಲ್ ಗಾಳಿಯಲ್ಲಿ ಗುಂಡು ಹಾರಿಸಿದವರು. ಕಾರ ಹುಣ್ಣಿಮೆ ನಿಮಿತ್ತ ಗ್ರಾಮದಲ್ಲಿ ಕರಿ ಹರಿಯುವ ಮುನ್ನ ಈ ಘಟನೆ ನಡೆದಿದ್ದು ಅನುಮತಿ ಪಡೆದು ಬಂದೂಕಿನಿಂದ ಗುಂಡು ಹಾರಿಸಲಾಗಿದೆ ಎಂದು ಹೇಳಲಾಗಿದೆ.