ವಿಜಯಪುರ: ಚಲಿಸುತ್ತಿದ್ದ ಟ್ರ್ಯಾಕ್ಟರ್ಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಇಬ್ಬರು ಸವಾರರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ತಾಳಿಕೋಟೆ ಪಟ್ಟಣದ ಹೊರವಲಯದಲ್ಲಿ ನಡೆದಿದೆ.
ಚಲಿಸುತ್ತಿದ್ದ ಟ್ರ್ಯಾಕ್ಟರ್ ಬೈಕ್ ಡಿಕ್ಕಿ: ಇಬ್ಬರು ಸಾವು - ತಾಳಿಕೋಟೆ ಪಟ್ಟಣದ ಹೊರವಲಯ
ಟ್ರ್ಯಾಕ್ಟರ್ಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಇಬ್ಬರು ಸವಾರರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ತಾಳಿಕೋಟೆ ಪಟ್ಟಣದ ಹೊರವಲಯದಲ್ಲಿ ನಡೆದಿದೆ.
ಚಲಿಸುತ್ತಿದ್ದ ಟ್ರ್ಯಾಕ್ಟರ್ ಬೈಕ್ ಡಿಕ್ಕಿ
ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು ಮತ್ತೋರ್ವ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಸಾವನ್ನಪ್ಪಿದ್ದಾನೆ. ತಾಳಿಕೋಟೆ ಪಟ್ಟಣದ ಹೊರ ಭಾಗದಲ್ಲಿ ಘಟನೆ ನಡೆದಿದೆ.
ಪೂಜಪ್ಪ ಮಿಣಜಗಿ (38), ಭೀಮಣ್ಣ ಹುಲಿಮನಿ (42 ) ಮೃತರು.ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಅಗ್ನಿ ಗ್ರಾಮದವರು ಎಂದು ಗುರುತಿಸಲಾಗಿದೆ. ತಾಳಿಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.