ವಿಜಯಪುರ: ಟಂಟಂ ವಾಹನದ ದಾಖಲಾತಿಗಳನ್ನು ಪೊಲೀಸರು ಪರಿಶೀಲಿಸಲು ಮುಂದಾದಾಗ ಹೆದರಿದ ಚಾಲಕ ಅವರಿಂದ ತಪ್ಪಿಸಿಕೊಳ್ಳಲು ವೇಗವಾಗಿ ವಾಹನ ಚಾಲನೆ ಮಾಡಿ ಎದುರಿಗೆ ಬಂದ ಬಸ್ಗೆ ಡಿಕ್ಕಿ ಹೊಡೆದ ಪರಿಣಾಮ ಟಂಟಂನಲ್ಲಿದ್ದ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕೊಲ್ಹಾರ ಪಟ್ಟಣದ ಬಳಿ ನಡೆದಿದೆ.
ಘಟನೆಯಲ್ಲಿ ಹಲವರಿಗೆ ಗಾಯಗಳಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಇಬ್ಬರು ಸ್ಥಳದಲ್ಲೇ ಸಾವಿಗೀಡಾದರೆ, ಮತ್ತಿಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ರಮಣ (62), ಲಕ್ಷ್ಮಿ (4), ಕಸ್ತೂರಿ (32) ಮೃತಪಟ್ಟವರು. ಮತ್ತೋರ್ವರ ಗುರುತು ಪತ್ತೆಯಾಗಿಲ್ಲ.