ವಿಜಯಪುರ: ಜಿಲ್ಲೆಯ ಸಿಂದಗಿ ಬಳಿ ನಡೆದ 13 ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣ ಇದೀಗ ಬಿಗ್ ಟ್ವಿಸ್ಟ್ ಪಡೆದುಕೊಂಡಿದೆ.
ಕಳೆದ ಎರಡು ದಿನಗಳ ಹಿಂದೆ ಅತ್ಯಾಚಾರ ಆರೋಪಿ ಠಾಣೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದ. ಈ ಹಿನ್ನೆಲೆ ಕರ್ತವ್ಯ ಲೋಪ ಆರೋಪದ ಮೇರೆಗೆ ಐವರು ಪೊಲೀಸ್ ಸಿಬ್ಬಂದಿ ಅಮಾನತು ಮಾಡಲಾಗಿತ್ತು. ನಂತರ ಪ್ರಕರಣದ ತನಿಖೆ ನಡೆಸುತ್ತಿದ್ದ ಅಧಿಕಾರಿಯನ್ನು ಸಹ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಆದೇಶ ಹೊರಡಿಸಿ, ವರ್ಗಾವಣೆ ಮಾಡಿದ್ದರು. ಇದೀಗ ಮತ್ತೆ ದಕ್ಷ ಅಧಿಕಾರಿ ನ್ಯಾಮಗೌಡರನ್ನು ಏಕಾಏಕಿ ಎತ್ತಂಗಡಿ ಮಾಡಿರುವುದು ಹಲವು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ.