ವಿಜಯಪುರ : ಭೀಮಾತೀರದ ಹಂತಕ ಮಹಾದೇವ ಸಾಹುಕಾರ ಭೈರಗೊಂಡ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳು ಶರಣಾಗಿದ್ದಾರೆ. ಪ್ರಕರಣದ ಪ್ರಮುಖ ಆರೋಪಿಯ ಪತ್ನಿ ವಿಮಲಾಬಾಯಿ ಚಡಚಣ ಹಾಗೂ ಸೋನು ರಾಠೋಡ 4ನೇ ಜೆಎಂಎಫ್ ಸಿ ನ್ಯಾಯಾಲಯದ ಮುಂದೆ ಶರಣಾಗಿದ್ದಾರೆ.
ಇತ್ತೀಚೆಗೆ ಎಡಿಜಿಪಿ ಅಲೋಕಕುಮಾರ್ ಅವರು ಚಡಚಣಕ್ಕೆ ಭೇಟಿ ನೀಡಿ ಎಲ್ಲ ಆರೋಪಿಗಳನ್ನು ತರಾಟೆಗೆ ತೆಗೆದುಕೊಂಡು, ತಕ್ಷಣ ಶರಣಾಗತಿ ಆಗದಿದ್ದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದರು. ಇದರಿಂದ ಹೆದರಿದ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.