ವಿಜಯಪುರ:ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕೊಲ್ಹಾರ ತಾಲೂಕಿನ ಚಿಕ್ಕ ಆಸಂಗಿ ಗ್ರಾಮದಲ್ಲಿ ನಡೆದಿದೆ.
ಆಯ ತಪ್ಪಿ ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಕ್ಕಳು ಸಾವು - chikka Asangi village
ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಚಿಕ್ಕ ಆಸಂಗಿ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ಆಯತಪ್ಪಿ ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಕ್ಕಳು ಸಾವು
ಆಕಾಶ ಮಹಾದೇವ ಬೆನ್ನೂರು (4) ಹಾಗೂ ಬೊರಮ್ಮ ಸಂಗಣ್ಣ ಬೆನ್ನೂರು (4) ಮೃತಪಟ್ಟ ಮಕ್ಕಳು. ಮನೆ ಹತ್ತಿರವಿರುವ ಚಿಕ್ಕಪ್ಪನ ತೋಟದ ಕೃಷಿ ಹೊಂಡದ ಬಳಿ ಆಟವಾಡುತ್ತಿದ್ದಾಗ ಆಯ ತಪ್ಪಿ ಕೃಷಿ ಹೊಂಡಕ್ಕೆ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಕೂಡಲೇ ಸ್ಥಳಕ್ಕಾಗಮಿಸಿದ ಕೊಲ್ಹಾರ ಪೊಲೀಸರು, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತ ಮಕ್ಕಳ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
Last Updated : Feb 12, 2021, 4:14 PM IST