ಕರ್ನಾಟಕ

karnataka

ETV Bharat / state

ವಿಜಯಪುರ; ಕೊರೊನಾಗೆ ಇಬ್ಬರು ಬಲಿ... ಮೃತರ ಸಂಖ್ಯೆ 27ಕ್ಕೆ ಏರಿಕೆ - Vijayapur corona case

ವಿಜಯಪುರ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಇಬ್ಬರು ಸಾವನ್ನಪ್ಪಿದ್ದು, ಮೃತರ ಸಂಖ್ಯೆ 27ಕ್ಕೆ ಏರಿಕೆಯಾಗಿದೆ.

two corona infected died in  Vijayapur district
ವಿಜಯಪುರ ಜಿಲ್ಲೆಯಲ್ಲಿ ಕೊರೊನಾಗೆ ಇಬ್ಬರು ಬಲಿ...ಮೃತರ ಸಂಖ್ಯೆ 27ಕ್ಕೆ ಏರಿಕೆ

By

Published : Jul 27, 2020, 8:52 PM IST

ವಿಜಯಪುರ: ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಇಬ್ಬರು ಸಾವನ್ನಪ್ಪಿದ್ದು, ಮೃತರ ಸಂಖ್ಯೆ 27ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್​. ಪಾಟೀಲ ತಿಳಿಸಿದ್ದಾರೆ.

8 ವರ್ಷಗಳಿಂದ ರಕ್ತದೊತ್ತಡ ಕಾಯಿಲೆಯಿಂದ ಬಳಲುತ್ತಿದ್ದ ಜಿಲ್ಲೆಯ ಬಸವನ ಬಾಗೇವಾಡಿ ನಿವಾಸಿ 61 ವರ್ಷ ವೃದ್ಧೆ (ಪಿ-94732) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ಇವರು ಜುಲೈ 23ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, 25ರಂದು ಮೃತಪಟ್ಟಿದ್ದಾರೆ. ರಕ್ತದೊತ್ತಡ ಕಾಯಿಲೆಯಿಂದ ಬಳಲುತ್ತಿದ್ದ ಅಗಸನಾಳದ ನಿವಾಸಿ 64 ವರ್ಷ ವೃದ್ಧ (ಪಿ-94796) ಕೂಡ ಚಿಕಿತ್ಸೆ ಫಲಕಾರಿಯಾಗದೆ ಜುಲೈ 24 ರಂದು ಮೃತಪಟ್ಟಿದ್ದಾರೆ.

ಈ ಇಬ್ಬರ ಗಂಟಲು ದ್ರವ ಮಾದರಿ ಪರೀಕ್ಷಿಸಲಾಗಿದ್ದು, ಇಬ್ಬರಿಗೂ ಕೊರೊನಾ ಸೋಂಕು ದೃಢಪಟ್ಟಿದೆ. ಮೃತರ ಅಂತ್ಯಸಂಸ್ಕಾರ ಶಿಷ್ಟಾಚಾರದಂತೆ ನೆರವೇರಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ABOUT THE AUTHOR

...view details