ಕರ್ನಾಟಕ

karnataka

ETV Bharat / state

ವಿಜಯಪುರ: ಸಿಡಿಲು ಬಡಿದು ಇಬ್ಬರು ಸಾವು - ತಿಕೋಟಾ ತಾಲೂಕಿನ ಸೋಮದೇವರಹಟ್ಟಿ ಗ್ರಾಮದಲ್ಲಿ ಸಿಡಿಲಿಗೆ ಯುವಕ ಸಾವು

ವಿಜಯಪುರ ಜಿಲ್ಲೆಯಲ್ಲಿ ಸಂಭವಿಸಿದ ಪ್ರತ್ಯೇಕ ಘಟನೆಗಳಲ್ಲಿ ಸಿಡಿಲು ಬಡಿದು ಇಬ್ಬರು ಮೃತಪಟ್ಟಿದ್ದಾರೆ.

ten-dead-as-lightning-strikes-three-vijayapura
ವಿಜಯಪುರ: ಸಿಡಿಲು ಬಡಿದು ಇಬ್ಬರು ಸಾವು

By

Published : Apr 15, 2022, 8:03 AM IST

ವಿಜಯಪುರ:ಜಿಲ್ಲೆಯಲ್ಲಿ ಸಂಭವಿಸಿದ ಪ್ರತ್ಯೇಕ ಘಟನೆಗಳಲ್ಲಿ ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿದ್ದಾರೆ. ಸಿಡಿಲಿಗೆ ಯುವಕನೊಬ್ಬ ಬಲಿಯಾಗಿರುವ ಘಟನೆ ತಿಕೋಟಾ ತಾಲೂಕಿನ ಸೋಮದೇವರಹಟ್ಟಿ ಎಲ್.ಟಿ ನಂ. 2ರಲ್ಲಿ ಗುರುವಾರ ರಾತ್ರಿ ನಡೆದಿದೆ.

ಯುವರಾಜ ಡಾಕು ರಾಠೋಡ (22) ಮೃತ ಯುವಕನಾಗಿದ್ದು, ತೋಟದ ಮನೆಯಲ್ಲಿ ವಾಸವಾಗಿದ್ದ. ರಾತ್ರಿ ಜೋರಾದ ಬಿರುಗಾಳಿ ಸಹಿತ ಮಳೆ ಬರುತ್ತಿತ್ತು. ಮೂತ್ರ ವಿಸರ್ಜನೆಗೆ ಮನೆಯಿಂದ ಹೊರಗಡೆ ಹೋದಾಗ ಈ ಘಟನೆ ಸಂಭವಿಸಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಈ ಕುರಿತು ತಿಕೋಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಬೆಂಗಳೂರು: ಮಳೆಗೆ ತಗ್ಗು ಪ್ರದೇಶಗಳು ಜಲಾವೃತ, ವಿದ್ಯುತ್‌ ಕಡಿತ

ರೈತ ಸಾವು:ಸಿಡಿಲು ಬಡಿದು ರೈತ ಸಾವನ್ನಪ್ಪಿರುವ ಘಟನೆ ವಿಜಯಪುರ ತಾಲೂಕಿನ ಮದಭಾವಿ ಗ್ರಾಮದಲ್ಲಿ ನಡೆದಿದೆ. ಜಮೀನಿನಲ್ಲಿದ್ದ ವೇಳೆ ಸಿಡಿಲು ಬಡಿದು ಮರೆಮಸಾಬ್ ಜಾತಗಾರ (42) ಎಂಬುವರು ಸಾವನ್ನಪ್ಪಿದ್ದಾನೆ.‌ ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಲಾಡ್ಜ್​​ನಲ್ಲಿ ಅಪ್ರಾಪ್ತೆಯ ಕೊಂದು, ಆತ್ಮಹತ್ಯೆಗೆ ಶರಣಾದ ಯುವಕ

ABOUT THE AUTHOR

...view details