ಕರ್ನಾಟಕ

karnataka

ETV Bharat / state

ವಿಜಯಪುರ: ಆಲಮಟ್ಟಿ ಎಡದಂಡೆ ಕಾಲುವೆಯಲ್ಲಿ ಎರಡು ಶವಗಳು ಪತ್ತೆ..! - Student committed suicide by hanging herself

ಆಲಮಟ್ಟಿ ಎಡದಂಡೆ ಕಾಲುವೆಯಲ್ಲಿ ಎರಡು ಶವಗಳು ಪತ್ತೆಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ನಿಡಗುಂದಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ.

Both bodies were found
ಆಲಮಟ್ಟಿ ಎಡದಂಡೆ ಕಾಲುವೆಯಲ್ಲಿ ಎರಡು ಶವಗಳು ಪತ್ತೆ

By

Published : Mar 8, 2023, 3:57 PM IST

ವಿಜಯಪುರ:ಆಲಮಟ್ಟಿ ಎಡದಂಡೆ ಕಾಲುವೆಯಲ್ಲಿ ಎರಡು ಶವಗಳು ಪತ್ತೆಯಾಗಿರುವ ಘಟನೆ ಜಿಲ್ಲೆಯ ನಿಡಗುಂದಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ನಿಡಗುಂದಿ ನಿವಾಸಿಯಾದ ಯಲ್ಲಪ್ಪ ಗುಡದಪ್ಪ ಗೋಳ(30), ರಾಜಾಸಾಬ ಕಲಾಲ್(35) ಅವರ ಶವ ಪತ್ತೆಯಾಗಿದೆ. ಕುಡಿದ ಮತ್ತಿನಲ್ಲಿ ಮೂರು ದಿನಗಳ ಹಿಂದೆ ಕಾಲುವೆಗೆ ಬಿದ್ದಿದ್ದ ಯಲ್ಲಪ್ಪ ಹಾಗೂ ನಿನ್ನೆ ಬಟ್ಟೆ ತೊಳೆಯಲು ಹೋಗಿ ಕಾಲುವೆಯಲ್ಲಿ ಬಿದ್ದಿದ್ದ ರಾಜಾಸಾಬ್ ಮೃತದೇಹ ಇಂದು ಪತ್ತೆಯಾಗಿದೆ. ಅಣತಿ ದೂರದಲ್ಲಿ ಇಬ್ಬರ ಶವಗಳು ಇಂದು ಪತ್ತೆಯಾಗಿವೆ. ನಿಡಗುಂದಿ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ.

ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ:ಇದು ವಿಜಯಪುರದ ಘಟನೆ ಆದರೆ, ದಾವಣಗೆರೆಯಲ್ಲಿ ಇನ್ನೊಂದು ಭಯಾನಕ ಘಟನೆ ನಡೆದಿದೆ.ವಸತಿ ನಿಲಯದಲ್ಲಿ ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ನಗರದಲ್ಲಿ ನಡೆದಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ಮಾತ್ರ ತಿಳಿದು ಬಂದಿಲ್ಲ. ವರ್ಷಿತಾ(18) ಆತ್ಮಹತ್ಯೆ ಮಾಡಿಕೊಂಡಿರುವ ಬಾಲಕಿ. ಜಿಲ್ಲೆಯ ಹರಿಹರ ನಗರದಲ್ಲಿ ಕಾಲೇಜೊಂದರಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಬಾಲಕಿ ವರ್ಷಿತಾ ಏಕಾಏಕಿ ಆತ್ಮಹತ್ಯೆ ಮಾಡಿಕೊಂಡಿರುವುದು ಪೋಷಕರನ್ನು ದಿಗ್ಭ್ರಮೆಗೊಳಿಸಿದೆ.

ಮೃತ ಬಾಲಕಿ ವರ್ಷಿತಾ ಮೂಲತ ದಾವಣಗೆರೆ ತಾಲೂಕಿನ ಮಾಯಕೊಂಡ ಹೋಬಳಿಯ ಬಸ್ಸಾಪುರ ಗ್ರಾಮದ ನಿವಾಸಿಯಾಗಿದ್ದಾರೆ. ಹರಿಹರದಲ್ಲಿ ವ್ಯಾಸಂಗ ಮಾಡ್ತಿದ್ದಳು. ಇನ್ನು ಮೃತ ವರ್ಷಿತಾ ಪೋಷಕರು ಆತ್ಮಹತ್ಯೆಯ ಬಗ್ಗೆ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಹಾಸ್ಟೆಲ್ ವಾರ್ಡನ್, ಸಿಬ್ಬಂದಿ ವರ್ಗ ವಿದ್ಯಾರ್ಥಿಯ ಆತ್ಮಹತ್ಯೆ ಕಾರಣರಾಗಿದ್ದಾರೆ ಎಂದು ಅವರು ಆರೋಪಿಸಿದರು.

ಮೃತ ವರ್ಷಿತಾಳಿಗೆ ನ್ಯಾಯ ಒದಗಿಸುವಂತೆ ಪೋಷಕರು ಒತ್ತಾಯಿಸುತ್ತಿದ್ದಾರೆ. ನಮ್ಮ ಮಗಳು ಆತ್ಮಹತ್ಯೆ ಮಾಡಿಕೊಳ್ಳುವಷ್ಟು ಹೇಡಿಯಲ್ಲ. ಕೂಡಲೇ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕು ಎಂದು ಪೋಷಕರು ಒತ್ತಾಯಿಸಿದರು. ಈ ಕುರಿತು ಹರಿಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿದ್ಯಾರ್ಥಿನಿಯ ಆತ್ಮಹತ್ಯೆಗೆ ಕಾರಣ ನಿಗೂಢ:ಮೃತ ವರ್ಷಿತಾ ಪೋಷಕರು ಆತ್ಮಹತ್ಯೆಯ ಬಗ್ಗೆ ಅನುಮಾನ ವ್ಯಕ್ತಪಡಿಸುತ್ತಿರುವ ಅವರ ಪೋಷಕರು ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಹರಿಹರ ನಗರ ಪೋಲಿಸ್ ಇಲಾಖೆಗೆ ಆಗ್ರಹಿಸಿ ದೂರು ನೀಡಿದ್ದಾರೆ. ಅದರೆ ವರ್ಷಿತಾಳ ಸಾವಿನ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಪೋಷಕರು ಕೂಡ ಮಗಳ ಸಾವಿಗೆ ಕಾರಣ ನಿಗೂಢವಾಗಿದೆ ಎಂದು ಅವರು ತಿಳಿಸಿದರು. ಹಾಸ್ಟೆಲ್ ವಾರ್ಡ್ ಹಾಗೂ ಸಿಬ್ಬಂದಿ ವರ್ಗ ಮೃತ ವರ್ಷಿತಾಳ ಸಾವಿಗೆ ಕಾರಣರಾಗಿದ್ದಾರೆ ಎಂದು ಪೋಷಕರು ದೂರಿದರು.

ಚಾಕುವಿನಿಂದ ಇರಿದು ಗೃಹಿಣಿ ಕೊಲೆ:ಒಂದೆಡೆ ಆತ್ಮಹತ್ಯೆ ಸುದ್ದಿಯಾದರೆ, ಹರಪನಹಳ್ಳಿಯಲ್ಲಿ ತಾಲೂಕಿನ ದುಗ್ಗಾವತಿ ಗ್ರಾಮದಲ್ಲಿ ಹುಚ್ಚು ಪ್ರೇಮಿಯೊಬ್ಬ ನಡುರಸ್ತೆಯಲ್ಲಿಯೇ ಚಾಕುವಿನಿಂದ ಇರಿದು ಗೃಹಿಣಿಯನ್ನು ಕೊಲೆಗೈದಿರುವ ಘಟನೆ ನಡೆದಿದೆ. ಪ್ರತಿಭಾ ನಾಗರಾಜ್ (25) ಕೊಲೆಯಾದವರು. ಮೂಕಪ್ಪನವರ ಹನುಮಂತ ಕೊಲೆ ಆರೋಪಿ. ಪ್ರೀತಿಸಿದವಳು ಕೈಗೆ ಸಿಗಲಿಲ್ಲ ಎಂದು ಪ್ರತಿಭಾಳನ್ನು ಆರೋಪಿ ಕೊಲೆ ಮಾಡಿದ್ದಾನೆ. ಮಹಿಳೆಯ ಸುಖಮಯ ದಾಂಪತ್ಯ ಜೀವನ ಸಹಿಸದೇ ಕಿಡಿಗೇಡಿ ದುಷ್ಕೃತ್ಯ ಎಸಗಿದ್ದಾನೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.

ದುಗ್ಗಾವತಿ ಗ್ರಾಮದ ದುಗ್ಗಮ್ಮ ದೇವಿ ಜಾತ್ರೆಯಲ್ಲಿ ಘಟನೆ ನಡೆದಿದೆ. ಜಾತ್ರೆ ನಿಮಿತ್ತ ಪ್ರತಿಭಾ ತನ್ನ ಚಿಕ್ಕಮ್ಮನ ಊರಿಗೆ ಬಂದಿದ್ದರು. ಇನ್ನೇನು ತನ್ನೂರಿಗೆ ಹೋಗಬೇಕು ಎನ್ನುವಷ್ಟರಲ್ಲಿ ಅಲ್ಲಿಗೆ ಬಂದಿದ್ದ ದುರುಳ ಮಹಿಳೆಗೆ ಮನಬಂದಂತೆ ಚಾಕುವಿನಿಂದ ಇರಿದಿದ್ದಾನೆ. ತೀವ್ರವಾಗಿ ಗಾಯಗೊಂಡಿದ್ದ ಪ್ರತಿಭಾರನ್ನು ದಾವಣಗೆರೆ ಜಿಲ್ಲೆಯ ಹರಿಹರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲು ಮುಂದಾದಾಗ ಅವರು ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ದುಗ್ಗಾವತಿ ಪಕ್ಕದ ಚಿರಸ್ತಹಳ್ಳಿ ಗ್ರಾಮದ ನಿವಾಸಿ ಹನುವಂತಪ್ಪ ಅದೇ ಗ್ರಾಮದ ಪ್ರತಿಭಾರನ್ನು ಪ್ರೀತಿಸುವುದಾಗಿ ಹೇಳಿಕೊಂಡು ಸುತ್ತುತ್ತಿದ್ದನಂತೆ. ಪ್ರತಿಭಾರನ್ನು ರಾಣೆಬೆನ್ನೂರಿನ‌ ನಾಗರಾಜ್ ಎಂಬುವರ ಜೊತೆ ವಿವಾಹ ಮಾಡಿಕೊಡಲಾಗಿದ್ದು, ದಂಪತಿಗೆ ಒಬ್ಬ ಗಂಡು ಮಗ ಇದ್ದಾನೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಹಲವಾಗಲು‌ ಪೊಲೀಸ್ ಠಾಣೆಯಲ್ಲಿ ‌ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಮಕ್ಕಳೆದುರಲ್ಲೇ ಹೆಂಡತಿಗೆ ಬೆಂಕಿ ಹಚ್ಚಿದ ಪಾಪಿ ಪತಿ.. ನರಳಿ ನರಳಿ ಪ್ರಾಣ ಬಿಟ್ಟ ಪತ್ನಿ

ABOUT THE AUTHOR

...view details