ವಿಜಯಪುರ: ಖಾಸಗಿ ಬಸ್ ಹಾಗೂ ಬೈಕ್ ಮಧ್ಯೆ ಅಪಘಾತ ಸಂಭವಿಸಿ ಸ್ಥಳದಲ್ಲೇ ಇಬ್ಬರು ಬೈಕ್ ಸವಾರರು ದುರ್ಮರಣಕ್ಕೀಡಾದ ಘಟನೆ ಕಳೆದ ತಡರಾತ್ರಿ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಬಳಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಈ ಅವಘಡ ನಡೆದಿದೆ. ಘಟನೆಯಲ್ಲಿ ಬೈಕ್ ಸವಾರರಾದ ಮಲ್ಲಪ್ಪ ಮಂಕಣಿ (24), ಯಲ್ಲನಗೌಡ ಮಂಕಣಿ (23) ಸಾವನ್ನಪ್ಪಿದ್ದಾರೆ. ಇಬ್ಬರೂ ನಿಡಗುಂದಿ ತಾಲೂಕಿನ ಅಬ್ಬಿಹಾಳ ಗ್ರಾಮದ ನಿವಾಸಿಗಳೆಂದು ತಿಳಿದು ಬಂದಿದೆ.