ವಿಜಯಪುರ: ವಿಜಯಪುರದಲ್ಲಿ ಸ್ಥಾಪನೆಯಾಗುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇರುವವರೆಗೆ ಆರಂಭವಾಗುವುದಿಲ್ಲ ಎಂಬ ಸಚಿವ ಉಮೇಶ ಕತ್ತಿ ಹೇಳಿಕೆಗೆ ಯತ್ನಾಳ ತಿರುಗೇಟು ನೀಡಿದ್ದಾರೆ. ನಾನೇ ವಿಮಾನ ನಿಲ್ದಾಣ ಉದ್ಘಾಟಿಸುವೆ ಎನ್ನುವ ಮೂಲಕ ಸಚಿವರಿಗೆ ತಕ್ಕ ಉತ್ತರ ನೀಡಿದ್ದಾರೆ.
ವಿಜಯಪುರ ಏರ್ಪೋರ್ಟ್ ನಾನೇ ಉದ್ಘಾಟಿಸುವೆ: ಕತ್ತಿ ಹೇಳಿಕೆಗೆ ಯತ್ನಾಳ್ ತಿರುಗೇಟು - ವಿಜಯಪುರ ಸುದ್ದಿ
ವಿಜಯಪುರದ ಹೊರವಲಯದ ಭೂತನಾಳದಲ್ಲಿ ತ್ರಿ - ಸ್ಟಾರ್ ಹೋಟೆಲ್ ಶಂಕುಸ್ಥಾಪನೆ ವೇಳೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ನಾನು ಶಾಸಕರಾಗಿ ಇರುವವರೆಗೂ ವಿಮಾನ ನಿಲ್ದಾಣ ಉದ್ಘಾಟನೆ ಆಗುವುದಿಲ್ಲ ಎಂದು ಸಚಿವ ಉಮೇಶ ಕತ್ತಿ ಹೇಳಿದ್ದು ಗೊತ್ತಾಯಿತು. ಆದರೆ, ಇದೇ ಅವಧಿಯಲ್ಲಿ ವಿಮಾನ ನಿಲ್ದಾಣ ಪೂರ್ಣಗೊಳಿಸಿ ಅದರ ಉದ್ಘಾಟನೆ ನಾನೇ ನೆರವೇರಿಸುತ್ತೇನೆ ಎಂದು ಟಾಂಗ್ ನೀಡಿದರು.
ವಿಜಯಪುರದ ಹೊರವಲಯದ ಭೂತನಾಳದಲ್ಲಿ ತ್ರಿ-ಸ್ಟಾರ್ ಹೋಟೆಲ್ ಶಂಕುಸ್ಥಾಪನೆ ವೇಳೆ ಮಾತನಾಡಿದ ಅವರು ನಾನು ಶಾಸಕರಾಗಿ ಇರುವವರೆಗೂ ವಿಮಾನ ನಿಲ್ದಾಣ ಉದ್ಘಾಟನೆ ಆಗುವುದಿಲ್ಲ ಎಂದು ಸಚಿವ ಉಮೇಶ ಕತ್ತಿ ಹೇಳಿದ್ದು ಗೊತ್ತಾಯಿತು. ಆದರೆ, ಇದೇ ಅವಧಿಯಲ್ಲಿ ವಿಮಾನ ನಿಲ್ದಾಣ ಪೂರ್ಣಗೊಳಿಸಿ ಅದರ ಉದ್ಘಾಟನೆ ನಾನೇ ನೆರವೇರಿಸುತ್ತೇನೆ ಎಂದು ಟಾಂಗ್ ನೀಡಿದರು.
ವಿಜಯಪುರದಲ್ಲಿ ವಿಮಾನ ನಿಲ್ದಾಣ ಕಾಮಗಾರಿ ಆರಂಭ ಮುನ್ನವೇ ಉಮೇಶ್ ಕತ್ತಿ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ನಡುವೆ ಮುಸುಕಿನ ಗುದ್ದಾಟ ನಡೆದಿದೆ. ಬಹಿರಂಗ ಕಾರ್ಯಕ್ರಮದಲ್ಲಿ ಯತ್ನಾಳ್ ಪ್ರತ್ಯುತ್ತರ ನೀಡಿದ್ದು, ಇದು ಬಿಜೆಪಿಯ ಒಡಕಿಗೆ ಮತ್ತಷ್ಟು ಪುಷ್ಟಿ ನೀಡಿದಂತಾಗಿದೆ.