ವಿಜಯಪುರ:ಕಾರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲಿಯೇ ಸಾವನ್ಬಪ್ಪಿರುವ ಘಟನೆ ಸಿಂದಗಿ ತಾಲೂಕಿನ ಹಂಚಿನಾಳ ಕ್ರಾಸ್ ಬಳಿ ನಡೆದಿದೆ. ಗೋಕಾಕ್ ಮೂಲದ ಸಂಜು ಹಿತಾರಗೌಡರ (33) ಹಾಗೂ ನಾಗರಾಜ ಯಡವಣ್ಣವರ (34) ದುರ್ದೈವಿಗಳು.
ಅಪರಿಚಿತ ವಾಹನ ಡಿಕ್ಕಿ: ರಸ್ತೆ ಅಪಘಾತದಲ್ಲಿ ಇಬ್ಬರು ಸಾವು - ETv Bharat Karnataka
ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಕಾರಿನಲ್ಲಿದ್ದ ಮೂವರ ಪೈಕಿ ಇಬ್ಬರು ಸ್ಥಳದಲ್ಲೇ ಅಸುನೀಗಿರುವ ಘಟನೆ ವಿಜಯಪುರದ ಸಿಂದಗಿ ತಾಲೂಕಿನ ಹಂಚಿನಾಳ ಕ್ರಾಸ್ ಬಳಿ ಸಂಭವಿಸಿದೆ.
ಕಾರಿಗೆ ಅಪರಿಚಿತ ವಾಹನ ಡಿಕ್ಕಿ
ಘಟನೆಯಲ್ಲಿ ಮತ್ತೊಬ್ಬ ಆಶಿಫ್ ಮುಲ್ಲಾ(24) ಎಂಬಾತನಿಗೆ ಗಾಯಗಳಾಗಿದ್ದು, ಸೃಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದನ್ನೂ ಓದಿ :ಕೊಪ್ಪಳ: ಬೈಕ್ಗೆ ಅಪರಿಚಿತ ವಾಹನ ಡಿಕ್ಕಿ, ಸವಾರರಿಬ್ಬರ ಸಾವು
Last Updated : Dec 16, 2022, 8:21 PM IST