ವಿಜಯಪುರ:ಅಪರಿಚಿತ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಭಯಾನಕ ಘಟನೆ ಗುಮ್ಮಟನಗರಿಯಲ್ಲಿ ನಡೆದಿದೆ. ನಗರದ ಕೆಎಚ್‌ಬಿ ಕಾಲೋನಿಯಲ್ಲಿ ಘಟನೆ ನಡೆದಿದ್ದು, ವ್ಯಕ್ತಿಯ ದೇಹವನ್ನು ತುಂಡು, ತುಂಡಾಗಿ ಕತ್ತರಿಸಿ ಕೊಲೆ ಮಾಡಲಾಗಿದೆ.
ಹತ್ಯೆಗೀಡಾದ ಅಪರಿಚಿತ ವ್ಯಕ್ತಿಯ ಹೆಸರು ಹಾಗೂ ಮಾಹಿತಿ ಲಭ್ಯವಾಗಿಲ್ಲ. ಹೋಂ ಗಾರ್ಡ್ ಅಥವಾ ಸೆಕ್ಯೂರಿಟಿ ಗಾರ್ಡ್ ಬಟ್ಟೆ ಧರಿಸಿದ್ದ ಸ್ಥಿತಿಯಲ್ಲಿ ತುಂಡಾಗಿ ಬಿದ್ದಿರುವ ಶವ ಪತ್ತೆಯಾಗಿದೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಸ್ಥಳಕ್ಕೆ ಜಲನಗರ ಪಿಎಸ್ ಮತ್ತು ಡಿವೈಎಸ್ಪಿ ಬಸವರಾಜ ಯಲಗಾರ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇಲ್ಲಿನ ಜಲನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.