ವಿಜಯಪುರ:ಅಪರಿಚಿತ ವ್ಯಕ್ತಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ನಗರದ ಐನಾಪುರ ಕ್ರಾಸ್‌ನ ಆಲದ ಮರದಲ್ಲಿ ಪತ್ತೆಯಾಗಿದೆ. ಸುಮಾರು 55 ವರ್ಷದ ವ್ಯಕ್ತಿ ಎಂದು ಅಂದಾಜಿಸಲಾಗಿದೆ.
ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ
ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ.
ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ
ಇನ್ನು ವ್ಯಕ್ತಿಯ ಸಾವಿನ ಕುರಿತಂತೆ ಸಾರ್ವಜನಿಕರು ಶಂಕೆ ವ್ಯಕ್ತಪಡಿಸಿದ್ದು, ಕೊಲೆ ಮಾಡಿ ಮರಕ್ಕೆ ನೇಣು ಹಾಕಿರಬಹುದು ಎಂದು ಶಂಕಿಸಲಾಗಿದೆ. ಮರದ ಬಳಿ ಓಡಾಡುವಾಗ ಶವ ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಶವವನ್ನು ಕೆಳಗಿಳಿಸಿದ್ದಾರೆ.
ಬಳಿಕ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಜಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.