ವಿಜಯಪುರ/ಬಾಗಲಕೋಟೆ:ಕೇಂದ್ರ ಸರ್ಕಾರದ ಕಾರ್ಮಿಕ ನೀತಿಗಳನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳು ನೀಡಿರುವ ಮುಷ್ಕರಕ್ಕೆ ವಿಜಯಪುರ ಹಾಗೂ ಬಾಗಲಕೋಟೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
ವಿಜಯಪುರ ನಗರದಲ್ಲಿ ಹಲವು ಸಂಘಟನೆಗಳ ಸದಸ್ಯರು ಒಟ್ಟಾರೆ ಸೇರಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಗಾಂಧಿ ವೃತ್ತ, ಅಂಬೇಡ್ಕರ್ ವೃತ್ತ ಮಾರ್ಗವಾಗಿ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಬಾಗಲಕೋಟೆಯಲ್ಲಿ ಜಿಲ್ಲಾಡಳಿತ ಭವನದ ಮುಂದೆ ಆಕ್ರೋಶ ಹೊರ ಹಾಕಿದರು.
ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಎಐಯುಟಿಸಿ ಸಂಘಟನೆ,ಕಾಂಗ್ರೆಸ್ ಮಜ್ದೂರ್ ಸಂಘಟನೆ,ರೈತ, ಕಾರ್ಮಿಕರು, ಅಂಗನವಾಡಿ ಕಾರ್ಯಕರ್ತೆಯರು, ಬ್ಯಾಂಕ್ ನೌಕರರ ಸಂಘಟನೆಗಳು ಸೇರಿದಂತೆ ಹಲವು ಸಂಘಟನೆಗಳು ಮುಷ್ಕರ ನಡೆಸಿದವು. ಅಹಿತಕರ ನಡೆಯದಂತೆ ವಿಜಯಪುರ ನಗರದಲ್ಲಿ 3 ಕೆಎಸ್‌ಆರ್‌ಪಿ ತುಕಡಿ, 9 ಡಿಆರ್ ತುಕಡಿ ಸೇರಿ 700 ಪೊಲೀಸರು ಬಂದೋಬಸ್ತ್ನಲ್ಲಿ ಇದ್ದರು.
ಬಾಗಲಕೋಟೆಯಲ್ಲಿ ಮುಷ್ಕರ ಪರಿಣಾಮ ಎಂದಿನಂತೆಯೇ ಸಾರಿಗೆ ಸಂಸ್ಥೆ ವಾಹನ ಸಂಚಾರ, ಶಾಲಾ, ಕಾಲೇಜು, ಅಂಗಡಿ ಮುಗ್ಗಟ್ಟು, ಸರ್ಕಾರಿ ಕಚೇರಿಗಳು, ಬ್ಯಾಂಕುಗಳು ಕಾರ್ಯನಿರ್ವಹಿಸಿದವು.