ವಿಜಯಪುರ:ಯುವಕನೊಬ್ಬನ ಮೇಲೆ ಕಳ್ಳತನ ಆರೋಪ ಹೊರಿಸಿ, ಆತನನ್ನು ಠಾಣೆಗೆ ಕರೆಯಿಸಿ ವಿಚಾರಣೆ ಮಾಡುವ ನೆಪದಲ್ಲಿ ಥಳಿಸಿ ಆತ್ಮಹತ್ಯೆಗೆ ಕಾರಣರಾದ ಆರೋಪದ ಮೇಲೆ ಪಿಎಸ್ಐವೊಬ್ಬರನ್ನು ಅಮಾನತು ಮಾಡಲಾಗಿದೆ. ಇಲ್ಲಿನ ಎಪಿಎಂಸಿ ಠಾಣೆ ಪಿಎಸ್ಐ ಸೋಮೇಶ ಗೆಜ್ಜಿ ಅಮಾನತುಗೊಂಡ ಅಧಿಕಾರಿಯಾಗಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆನಂದಕುಮಾರ್ ಈ ಆದೇಶ ಹೊರಡಿಸಿದ್ದಾರೆ. ಕೆಲ ದಿನಗಳ ಹಿಂದೆ ಬಸವನಬಾಗೇವಾಡಿ ತಾಲೂಕಿನ ಡೋಣೂರ ಗ್ರಾಮದ ಸೋಮಶೇಖರ ನಾಗಮೋತಿ ಎಂಬ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದ. ಇದಕ್ಕೂ ಮುನ್ನ ಯುವಕ ಸೋಮಶೇಖರ, ತಮ್ಮ ಸಹೋದರನ ಕಾರಿನಲ್ಲಿದ್ದ ಹಣ ಕದ್ದಿದ್ದಾನೆ ಎಂಬ ಆರೋಪದ ಮೇಲೆ ಪಿಎಸ್ಐ ಸೋಮೇಶ ದೂರು ದಾಖಲಿಸಿಕೊಂಡು ಠಾಣೆಗೆ ಕರೆಯಿಸಿ ಥಳಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.