ವಿಜಯಪುರ:ವಿಜಯಪುರ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾ ಚುನಾವಣಾಧಿಕಾರಿಯಾದ ಜಿಲ್ಲಾಧಿಕಾರಿ ಡಾ ವಿಜಯ ಮಾಹಾಂತೇಶ ದಾನಮ್ಮನವರ ಮತ್ತು ಅವರ ಪತ್ನಿ ಶ್ವೇತಾ ದಾನಮ್ಮನವರ ಕುಟುಂಬ ಸಮೇತರಾಗಿ ಆಗಮಿಸಿ, ಸರತಿ ಸಾಲಿನಲ್ಲಿ ನಿಂತು ದರಬಾರ ಶಾಲೆಯಲ್ಲಿನ ಮತಗಟ್ಟೆಯಲ್ಲಿ ಹಕ್ಕು ಚಲಾಯಿಸಿ ಮತದಾನದ ಮಹತ್ವ ಸಾರಿದರು.
ಮತದಾನ ಒಂದು ಪವಿತ್ರವಾದ ಕರ್ತವ್ಯ, ಮತದಾನ ನಮ್ಮ ಹಕ್ಕು ಹಾಗೂ ಕರ್ತವ್ಯ ಕೂಡಾ. ನಮ್ಮ ಮತ ಪ್ರಗತಿಗೆ ಬರೆಯುವ ಮುನ್ನುಡಿ. ಮತದಾನ ನಮ್ಮೆಲ್ಲರ ಜವಾಬ್ದಾರಿಯೂ ಸಹ ಆಗಿದೆ ಎಂದು ಹೇಳಿದರು.
ವಾರ್ಡ್ ಸಂಖ್ಯೆ 48ರ ಶಶಹಾಪೂರ ಅಗಸಿಯಲ್ಲಿನ ಸರ್ಕಾರಿ ಕನ್ನಡ ಹೆಣ್ಣು ಮಕ್ಕಳ ಶಾಲೆ ನಂ.6ರ ಕೊಠಡಿ ಸಂಖ್ಯೆ 01ರಲ್ಲಿ ನಡೆಯುತ್ತಿರುವ ಮತದಾನ ಕೇಂದ್ರಕ್ಕೆ ಜಿಲ್ಲಾ ಚುನಾವಣಾ ಅಧಿಕಾರಿಯಾದ ಜಿಲ್ಲಾಧಿಕಾರಿ ಡಾ ವಿಜಯ ಮಹಾಂತೇಶ್ ದಾನಮ್ಮನವರ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೆಚ್ ಡಿ ಆನಂದ ಕುಮಾರ್ ಭೇಟಿ ನೀಡಿ, ಅಗತ್ಯ ಸಲಹೆ ಸೂಚನೆ ನೀಡಿದರು. ಮತದಾರರ ಸಮಸ್ಯೆಗಳನ್ನು ಆಲಿಸಿ, ಸಲಹೆ ನೀಡಿದರು.