ಕರ್ನಾಟಕ

karnataka

ETV Bharat / state

ವಿಜಯಪುರ ಜಿಲ್ಲೆಯಲ್ಲಿಂದು 130 ಜನರಲ್ಲಿ ಕೊರೊನಾ ಸೋಂಕು ದೃಢ - Vijayapur District Coronavirus Updated

ವಿಜಯಪುರ ಜಿಲ್ಲೆಯ ಇಂದಿನ ಕೊರೊನಾ ಅಂಕಿ-ಅಂಶ ಹೀಗಿದೆ.

Vijayapur District Coronavirus Update
ವಿಜಯಪುರ ಜಿಲ್ಲೆಯ ಇಂದಿನ ಕೊರೊನಾ ಅಂಕಿ-ಅಂಶ

By

Published : Oct 10, 2020, 9:09 PM IST

ವಿಜಯಪುರ:ಜಿಲ್ಲೆಯಲ್ಲಿ ಇಂದು 130 ಹೊಸ ಪಾಸಿಟಿವ್ ಪ್ರಕರಣಗಳು ಕಾಣಿಸಿಕೊಂಡಿವೆ. ಈ ಮೂಲಕ ಸಂಖ್ಯೆ ಇದೀಗ 10769ಕ್ಕೆ ತಲುಪಿದೆ.

ಕೊರೊನಾದಿಂದ ಇಂದು 236 ಜನ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ ಕೊರೊನಾದಿಂದ ಗುಣಮುಖರಾ‌ದವರ ಸಂಖ್ಯೆ 9,672ಕ್ಕೆ ಏರಿಕೆಯಾಗಿದೆ. ನಾನಾ ಕಾಯಿಲೆ, ಕೊರೊನಾ ಸೋಂಕಿನಿಂದ ಇಂದು ಓರ್ವ ಮೃತಪಟ್ಟಿದ್ದಾನೆ. ಮೃತರ ಸಂಖ್ಯೆ 174ಕ್ಕೆ ಏರಿಕೆಯಾಗಿದೆ. ಮೃತರ ಅಂತ್ಯ ಸಂಸ್ಕಾರವನ್ನು ಶಿಷ್ಟಾಚಾರದಂತೆ ನೆರವೇರಿಸಲಾಗಿದೆ.

ವಿಜಯಪುರ ಜಿಲ್ಲಾಸ್ಪತ್ರೆ, ನಾನಾ ಖಾಸಗಿ ಆಸ್ಪತ್ರೆಗಳಲ್ಲಿ 923 ಜನರಿಗೆ ಚಿಕಿತ್ಸೆ ಮುಂದುವರೆಸಲಾಗಿದೆ. ಇಲ್ಲಿಯವರೆಗೆ 1,17,036 ಜನರ ಮೇಲೆ ನಿಗಾ ಇಡಲಾಗಿದೆ. 1,16,982 ಜನರ ಸ್ಯಾಂಪಲ್ ಪಡೆಯಲಾಗಿದೆ. ಇವರಲ್ಲಿ 1,04,941 ಜನರ ವರದಿ ನೆಗೆಟಿವ್ ಆಗಿದೆ. 10,769 ಜನರಿಗೆ ಪಾಸಿಟಿವ್ ದೃಢಪಟ್ಟಿದೆ. ಇನ್ನು 1367 ಜನರ ವರದಿ ಬರಬೇಕಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ತಿಳಿಸಿದ್ದಾರೆ.

ABOUT THE AUTHOR

...view details