ವಿಜಯಪುರ:ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಆಧಿಕಾರಿಗಳೊಂದಿಗೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ ನಡೆಸಿದರು.
ವಿಜಯಪುರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ: ಬೇಸಿಗೆ ಹಿನ್ನೆಲೆ ಅಗತ್ಯ ಕ್ರಮಕ್ಕೆ ಸೂಚನೆ - ಬಿಸಿಲಿನ ತಾಪಮಾನ ಹೆಚ್ಚಾಗಲಿದೆ
ವಿಜಯಪುರದಲ್ಲಿ ಮುಂಬರುವ ದಿನಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಲಿದ್ದು, ಮುನ್ನೆಚ್ಚರಿಕೆ ಕ್ರಮಗಳನ್ನ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಆಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಬಿಸಿಲಿನ ತಾಪಮಾನ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಬೇಕು. ಪುರಸಭೆ ಹಾಗೂ ಮಹಾನಗರ ಪಾಲಿಕೆಯಿಂದ ಸಾರ್ವಜನಿಕ ಸ್ಥಳಗಳಲ್ಲಿ ಮೇಲ್ಛಾವಣಿ ವ್ಯವಸ್ಥೆ ಕಲ್ಪಿಸಬೇಕು. ಪಾಲಿಕೆಯಿಂದ ತುರ್ತು ಕಂಟ್ರೋಲ್ ರೂಂ ತೆರೆಯಬೇಕು. ಬಿಸಿಲಿನ ತಾಪಮಾನಕ್ಕೆ ಸಾವು ನೋವುಗಳಾದ್ರೆ ಜಿಲ್ಲಾ ವಿಪತ್ತು ನಿರ್ವಹಣಾ ಘಟಕದ 1077 ಸಹಾಯವಾಣಿಗೆ ಸಾರ್ವಜನಿಕರು ಕರೆ ಮಾಡಿ ತಿಳಿಸುವಂತೆ ಅಧಿಕಾರಿಗಳು ಕ್ರಮ ವಹಿಸಬೇಕೆಂದು ಸೂಚಿಸಿದರು.
ಈ ಮುಂದಿನ ದಿನಗಳಲ್ಲಿ ಜಿಲ್ಲೆಯ ಇಂಡಿ ಹಾಗೂ ಚಡಚಣ ಭಾಗದಲ್ಲಿ ತಾಪಮಾನ ಏರಿಕೆ ಕುರಿತು ಅಗತ್ಯ ಕ್ರಮಗಳ ಬಗ್ಗೆ ಅಧಿಕಾರಿಗಳು ಜಿಲ್ಲಾಧಿಕಾರಿಗೆ ಮನವರಿಕೆ ಮಾಡಿದರು.