ವಿಜಯಪುರ : ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಹೊರಬಿದ್ದಿದ್ದು, ವಿಜಯಪುರ ಜಿಲ್ಲೆಯು ರಾಜ್ಯದಲ್ಲಿ ಮೂರನೇ ಸ್ಥಾನ ಗಳಿಸಿದೆ. ಒಟ್ಟು 28,739 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 21,261 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಈ ಮೂಲಕ ಜಿಲ್ಲೆಯು ಶೇ.77.14 ಫಲಿತಾಂಶ ಗಳಿಸಿದ್ದು, ರಾಜ್ಯದಲ್ಲಿ ಮೂರನೇ ಸ್ಥಾನ ಪಡೆದುಕೊಂಡಿದೆ.
ದ್ವಿತೀಯ ಪಿಯುಸಿ ಫಲಿತಾಂಶ.. ವಿಜಯಪುರ ಜಿಲ್ಲೆಗೆ ಮೂರನೇ ಸ್ಥಾನ - vijayapur district got 3rd place PUC result
ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಹೊರಬಿದ್ದಿದ್ದು, ದ್ವಿತೀಯ ಪಿಯುಸಿ ಜಿಲ್ಲಾವಾರು ಫಲಿತಾಂಶದಲ್ಲಿ ವಿಜಯಪುರ ಜಿಲ್ಲೆಯು ರಾಜ್ಯದಲ್ಲಿ ಮೂರನೇ ಸ್ಥಾನಗಳಿಸಿದೆ.
ಕಳೆದ ವರ್ಷ ವಿಜಯಪುರ ಜಿಲ್ಲೆಗೆ ಶೇ. 54ರಷ್ಟು ಫಲಿತಾಂಶ ಬಂದಿತ್ತು. ಈ ಶೈಕ್ಷಣಿಕ ವರ್ಷ ವಿದ್ಯಾರ್ಥಿಗಳ ಕಲಿಕೆಗೆ ಹೊಸ ಹೊಸ ನಿಯಮಗಳನ್ನು ಅಳವಡಿಸಿಕೊಂಡ ಮೇಲೆ ಶೇ. 77.14ರಷ್ಟು ಫಲಿತಾಂಶ ಬಂದಿದೆ. 16,750 ವಿದ್ಯಾರ್ಥಿಗಳಲ್ಲಿ 12,159 ವಿದ್ಯಾರ್ಥಿಗಳು ಪಾಸಾಗಿದ್ದರೆ, 119,89 ವಿದ್ಯಾರ್ಥಿನಿಯರಲ್ಲಿ 9,102 ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ. ಕಲಾ ವಿಭಾಗದಲ್ಲಿ ಶೇ.70.72, ವಿಜ್ಞಾನ ವಿಭಾಗದಲ್ಲಿ ಶೇ. 79.06 ಹಾಗೂ ವಾಣಿಜ್ಯ ವಿಭಾಗದಲ್ಲಿ ಶೇ. 76.09 ಫಲಿತಾಂಶ ಬಂದಿದೆ. ಗ್ರಾಮೀಣ ವಿಭಾಗದಲ್ಲಿ ಶೇ. 77.82 ಹಾಗೂ ನಗರ ಪ್ರದೇಶದಲ್ಲಿ ಶೇ. 71.37ರಷ್ಟು ಫಲಿತಾಂಶ ಬಂದಿದೆ.
ಓದಿ :ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಜೂನ್ ಕೊನೆಯಲ್ಲಿ ಪ್ರಕಟ : ಸಚಿವ ನಾಗೇಶ್