ವಿಜಯಪುರ:ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೇ ವ್ಯಕ್ತಿಯೊಬ್ಬರು ಸಾವನಪ್ಪಿರುವ ಅಮಾನವೀಯ ಘಟನೆ ವಿಜಯಪುರದಲ್ಲಿ ನಡೆದಿದೆ.
ವಿಜಯಪುರ: ಸೂಕ್ತ ಸಮಯಕ್ಕೆ ಚಿಕಿತ್ಸೆ ದೊರೆಯದೇ ರೋಗಿ ಸಾವು - Patient died
ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಮಲಘಾಣ ಗ್ರಾಮದ ರೋಗಿ ಗುರುವಾರ ರಾತ್ರಿ ಚಿಕಿತ್ಸೆಗಾಗಿ ವಿಜಯಪುರಕ್ಕೆ ಆಗಮಿಸಿದ್ದರು. ಖಾಸಗಿ ಹಾಗೂ ಸರ್ಕಾರಿ ವೈದ್ಯರು ಚಿಕಿತ್ಸೆ ನೀಡಲು ಹಿಂದೇಟು ಹಾಕಿದ್ದರು ಎನ್ನಲಾಗಿದೆ. ಹೀಗಾಗಿ ರೋಗಿ ಮೃತಪಟ್ಟಿದ್ದಾರೆ ಎಂದು ಅವರ ಸಂಬಂಧಿಕರು ಆರೋಪಿಸಿದ್ದಾರೆ.
ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಮಲಘಾಣ ಗ್ರಾಮದ ರೋಗಿ ಗುರುವಾರ ರಾತ್ರಿ ಚಿಕಿತ್ಸೆಗಾಗಿ ವಿಜಯಪುರಕ್ಕೆ ಆಗಮಿಸಿದ್ದರು. ಖಾಸಗಿ ಹಾಗೂ ಸರ್ಕಾರಿ ವೈದ್ಯರು ಚಿಕಿತ್ಸೆ ನೀಡಲು ಹಿಂದೇಟು ಹಾಕಿದ್ದರು ಎನ್ನಲಾಗಿದೆ. ರಾತ್ರಿ ಇಡಿ ಅಲೆದು ಕೊನೆಗೆ ಜಿಲ್ಲಾಧಿಕಾರಿಗಳ ಕಚೇರಿಗೆ ರೋಗಿ ಸಮೇತ ಪೋಷಕರು ಆಗಮಿಸಿದ್ದರು. ರೋಗಿಯನ್ನು ಖುದ್ದು ಭೇಟಿಯಾಗಿದ್ದ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ಜಿಲ್ಲಾಸ್ಪತ್ರೆಯ ಅಧೀಕ್ಷಕರಿಗೆ ಪೋನ್ ಮಾಡಿ ರೋಗಿಯನ್ನು ದಾಖಲಿಸಿಕೊಳ್ಳುವಂತೆ ಸೂಚಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ತಡ ರಾತ್ರಿ ರೋಗಿ ಮೃತಪಟ್ಟಿದ್ದಾರೆ.
ತಡರಾತ್ರಿ ಮೃತ ರೋಗಿಯ ಕೋವಿಡ್ ಪರೀಕ್ಷೆ ನಡೆಸಿರುವ ವೈದ್ಯರು ಶುಕ್ರವಾರ ಮಧ್ಯರಾತ್ರಿ ಮೃತ ದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.