ವಿಜಯಪುರ: ಮಹಾಮಾರಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜಿಲ್ಲಾ ರೈಲ್ವೆ ಪೊಲೀಸ್ ಒಬ್ಬರಿಗೆ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆ ವಿಜಯಪುರ ರೈಲ್ವೆ ಪೊಲೀಸ್ ಠಾಣೆಯನ್ನು ಸಂಪೂರ್ಣ ಸೀಲ್‌ಡೌನ್ ಮಾಡಲಾಗಿದೆ.
ಕಳೆದ ಜೂನ್ 24 ರಂದು 21 ಜನ ರೈಲ್ವೆ ಪೊಲೀಸರ ಗಂಟಲು ದ್ರವದ ಮಾದರಿ ಸಂಗ್ರಹಿಸಿ, ಪರೀಕ್ಷೆಗೆ ಕಳುಹಿಸಲಾಗಿತ್ತು. ಈ ಪೈಕಿ ಮಹಿಳಾ ಕಾನ್ಸ್‌ಟೇಬಲ್ ಒಬ್ಬರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.