ವಿಜಯಪುರ:ಜಿಲ್ಲೆಯ ಆದರ್ಶ ನಗರ ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಕೊರೊನಾ ಮಹಾಮಾರಿಗೆ ಕೊನೆಯುಸಿರೆಳೆದಿದ್ದಾರೆ.
ವಿಜಯಪುರ: ಮಹಿಳಾ ಪಿಎಸ್ಐ ಕೊರೊನಾಗೆ ಬಲಿ - ವಿಜಯಪುರ
ಪಿಎಸ್ಐ ಸುಲೋಚನಾ ಭಜಂತ್ರಿ ಕೊರೊನಾ ಸೋಂಕಿಗೆ ಪ್ರಾಣ ಕಳೆದುಕೊಂಡಿದ್ದಾರೆ.
ಪಿಎಸ್ಐ ಸುಲೋಚನಾ ಭಜಂತ್ರಿ
ಸುಲೋಚನಾ ಭಜಂತ್ರಿ ಕೊರೊನಾ ಸೋಂಕಿಗೆ ಬಲಿಯಾದವರು. ಬೆಳಗಾವಿ ಉಪಚುನಾವಣೆ ಕರ್ತವ್ಯ ಮುಗಿಸಿಕೊಂಡು ವಿಜಯಪುರಕ್ಕೆ ಆಗಮಿಸಿದ್ದ ಇವರಿಗೆ ರಾತ್ರಿ ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ. ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಪಿಎಸ್ಐ ಸುಲೋಚನಾ ಭಜಂತ್ರಿಯವರಿಗೆ ಪತಿ, ಇಬ್ಬರು ಮಕ್ಕಳಿದ್ದಾರೆ.