ಕರ್ನಾಟಕ

karnataka

ETV Bharat / state

ವಿಜಯಪುರ: ಲಂಚ ಸ್ವೀಕರಿಸುತ್ತಿದ್ದ ವೇಳೆ ಎಸಿಬಿ ಬಲೆಗೆ ಬಿದ್ದ ಅಧಿಕಾರಿಗಳು - ಎಸಿಬಿ ಬಲೆಗೆ ಬಿದ್ದ ಅಧಿಕಾರಿಗಳು

ಮುದ್ದೇಬಿಹಾಳ ತಾಲೂಕಿನ ತಂಗಡಗಿ ಗ್ರಾ. ಪಂ ಪಿಡಿಒ, ಬಿಲ್ ಕಲೆಕ್ಟರ್ ಹಾಗೂ ಕಾರ್ಯದರ್ಶಿ ಎಸಿಬಿ ಬಲೆಗೆ ಬಿದ್ದಿದ್ದಾರೆ.

Vijayapura: ACB attack and officers caught red hand
ವಿಜಯಪುರ: ಲಂಚ ಸ್ವೀಕರಿಸುತ್ತಿದ್ದ ವೇಳೆ ಎಸಿಬಿ ಬಲೆಗೆ ಬಿದ್ದ ಅಧಿಕಾರಿಗಳು

By

Published : Feb 1, 2020, 3:31 PM IST

ವಿಜಯಪುರ:ಮುದ್ದೇಬಿಹಾಳ ತಾಲೂಕಿನ ತಂಗಡಗಿ ಗ್ರಾ.ಪಂ. ಪಿಡಿಒ, ಬಿಲ್ ಕಲೆಕ್ಟರ್ ಹಾಗೂ ಕಾರ್ಯದರ್ಶಿ ಎಸಿಬಿ ಬಲೆಗೆ ಬಿದ್ದಿದ್ದಾರೆ.

ಗ್ರಾ. ಪಂ ಅಧ್ಯಕ್ಷ ಸಂಗಯ್ಯ ಸಾರಂಗಮಠ ಅವರಿಂದ 20,000 ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಎಸಿಬಿ ದಾಳಿ ನಡೆಸಿದ್ದು, ಅಧಿಕಾರಿಗಳು ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದಾರೆ.

ತಂಗಡಗಿ ಗ್ರಾಪಂ ಪಿಡಿಒ ಖೂಭಾಸಿಂಗ್ ಜಾಧವ, ಕಾರ್ಯದರ್ಶಿ ಪ್ರಶಾಂತ ಸಜ್ಜನ, ಬಿಲ್ ಕಲೆಕ್ಟರ್ ವಿನೋದ್​​ ನಾಯಕ ಎಸಿಬಿ ಬಲೆಗೆ ಬಿದ್ದ ಅಧಿಕಾರಿಗಳು. 14ನೇ ಹಣಕಾಸು ಯೋಜನೆಯಡಿ ಜಿ. ಪಂ ಗೆ ಎರಡು ಕ್ರಿಯಾಯೋಜನೆ ಕಳಿಸಲು ಪ್ರತಿ ಸದಸ್ಯರಿಂದ ತಲಾ ಎರಡು ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಪಂಚಾಯತ್ ನಲ್ಲಿಯೇ ಇಪ್ಪತ್ತು ಸಾವಿರ ರೂಪಾಯಿ ಲಂಚ ಸ್ವೀಕರಿಸುವಾಗ ಡಿಎಸ್​ಪಿ ವೇಣುಗೋಪಾಲ್​​​​​ ನೇತೃತ್ವದ ತಂಡ ದಾಳಿ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ABOUT THE AUTHOR

...view details