ವಿಜಯಪುರ:ವೇಗವಾಗಿ ಚಲಿಸುತ್ತಿದ್ದ ಆ್ಯಂಬುಲೆನ್ಸ್ ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ಹೊರವಲಯದ ಹಿಟ್ನಳ್ಳಿ ಫಾರ್ಮ್ ಬಳಿ ನಡೆದಿದೆ.
ವಿಜಯಪುರ: ಅಪಘಾತದಲ್ಲಿ ಆ್ಯಂಬುಲೆನ್ಸ್ ಚಾಲಕ ಸಾವು - Ambulance driver's death
ಮೃತ ಆ್ಯಂಬುಲೆನ್ಸ್ ಚಾಲಕನಿಗೆ ಸುಮಾರು 35 ವರ್ಷ ವಯಸ್ಸಾಗಿದ್ದು ಆತನ ಹೆಸರು ತಿಳಿದುಬಂದಿಲ್ಲ. ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಸೇರಿದ ಆ್ಯಂಬುಲೆನ್ಸ್ ಇದಾಗಿದೆ. ವಿಜಯಪುರದಿಂದ ಬೆಂಗಳೂರು ಕಡೆಗೆ ವಾಹನವನ್ನು ವೇಗವಾಗಿ ತಗೆದುಕೊಂಡು ಹೋಗುವ ವೇಳೆ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ ಎಂಬ ಮಾಹಿತಿ ದೊರೆತಿದೆ.
ಚಾಲಕ ಸಾವು
ಸ್ಥಳಕ್ಕೆ ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.