ವಿಜಯಪುರ: ಫಲಾನುಭವಿಗಳಿಗೆ ನೀಡಬೇಕಿದ್ದ ಆಹಾರ ಸಾಮಗ್ರಿಗಳನ್ನು ಅಕ್ರಮವಾಗಿ ಮನೆಗೆ ತೆಗೆದುಕೊಂಡು ಹೋಗುತ್ತಿದ್ದ ಅಂಗನವಾಡಿ ಕಾರ್ಯಕರ್ತೆಯನ್ನು ತಡೆದ ಜನ ತಾರಾಟೆಗೆ ತೆಗೆದುಕೊಂಡ ಘಟನೆ ಜಿಲ್ಲೆಯಲ್ಲಿ ಜರುಗಿದೆ.
ಅಕ್ರಮ ದಾಸ್ತಾನು ಸಾಗಿಸುತ್ತಿದ್ದ ಅಂಗನವಾಡಿ ಶಿಕ್ಷಕಿಗೆ ಜನರ ತರಾಟೆ - ವಿಜಯಪುರ ಜಿಲ್ಲ ಸುದ್ದಿ
ಅಂಗನವಾಡಿ ಶಿಕ್ಷಕಿಯೊಬ್ಬರು ಫಲಾನುಭವಿಗಳಿಗೆ ನೀಡಬೇಕಿದ್ದ ಆಹಾರ ಸಾಮಗ್ರಿಗಳನ್ನು ಮನೆಗೆ ತೆಗೆದುಕೊಂಡು ಹೋಗುತ್ತಿದ್ದಾಗ ಜನರ ಕೈಗೆ ಸಿಕ್ಕಿಬಿದ್ದಿದ್ದಾರೆ.
ಅಂಗನವಾಡಿ ಶಿಕ್ಷಕಿ
ಬಸವನ ಬಾಗೇವಾಡಿ ತಾಲೂಕಿನ ಯಂಭತ್ನಾಳ ಗ್ರಾಮದ ಅಂಗನವಾಡಿ ಕಾರ್ಯಕರ್ತೆ ಲಲಿತಾ ತೋಟದ ಎಂಬುವವರು ಬೇಳೆ ಕಾಳು ಸೇರಿದಂತೆ ಇತರೆ ಆಹಾರ ಸಾಮಾಗ್ರಿಗಳನ್ನು ಅಕ್ರಮವಾಗಿ ಮನೆಗೆ ಸಾಗಿಸುತ್ತಿರುವ ಬಗ್ಗೆ ಮಾಹಿತಿ ಪಡೆದ ಗ್ರಾಮಸ್ಥರು ತಡೆದು ತರಾಟೆಗೆ ತೆಗೆದುಕೊಂಡಿದ್ದಾರೆ. ಅಲ್ಲದೆ ಕಾರ್ಯಕರ್ತೆಯನ್ನು ಸೇವೆಯಿಂದ ಅಮಾನತು ಮಾಡುವಂತೆ ಆಗ್ರಹಿಸಿದ್ದಾರೆ.