ವಿಜಯಪುರ: ಬೈಕ್ಗಳು ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ನಿಡಗುಂದಿಯ ಬೇನಾಳ ಹಾಗೂ ವಂದಾಲ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಮೃತರನ್ನು ಕೌಲಗಿ ಗ್ರಾಮದ ರಮೇಶ ಶರಣಪ್ಪ ಬ್ಯಾಕೋಡ (25) ಹಾಗೂ ಬಳೂತಿಯ ನಂದಬಸು ಬಸೆಟ್ಟಿ(24) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ತಾಯಿ ಮತ್ತು ಮಗನಿಗೆ ಗಂಭೀರ ಗಾಯವಾಗಿದ್ದು, ಗಾಯಾಳುಗಳನ್ನು ನಿಡಗುಂದಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.