ವಿಜಯಪುರ: ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿಯಾಗಿ ವ್ಯಕ್ತಿವೋರ್ವ ಸಾವನ್ನಪ್ಪಿರುವ ಘಟನೆ ಕೊಲ್ಹಾರ ಸಮೀಪದ ರೋಣಿಹಾಳ ಕ್ರಾಸ್ ಬಳಿ ನಡೆದಿದೆ.
ರೋಣಿಹಾಳ ಗ್ರಾಮದ ಲಾಲಸಾಬ್ ನದಾಫ್ ಮೃತ ವ್ಯಕ್ತಿ. ಬೈಕ್ನಲ್ಲಿ ರಸ್ತೆ ದಾಟುವಾಗ ಕಾರು ಡಿಕ್ಕಿ ಹೊಡೆದು ಈ ದುರ್ಘಟನೆ ನಡೆದಿದೆ. ಸ್ಥಳದಲ್ಲಿ ಪದೇ ಪದೆ ಇಂತಹ ಅವಘಡಗಳು ನಡೆಯುತ್ತಿದ್ದು, ಮೇಲ್ಸೇತುವೆ ನಿರ್ಮಾಣ ಮಾಡಬೇಕೆಂದು ಸ್ಥಳೀಯರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.