ವಿಜಯಪುರ:ಉಕ್ರೇನ್ ಹಾಗೂ ರಷ್ಯಾ ನಡುವಿನ ಯುದ್ಧದಲ್ಲಿ ಸುರಕ್ಷಿತವಾಗಿ ತಾಯ್ನಾಡಿಗೆ ಮರಳಿದ ಜಿಲ್ಲೆಯ 16 ವಿದ್ಯಾರ್ಥಿಗಳ ಮುಂದಿನ ಭವಿಷ್ಯದ ಕುರಿತಂತೆ ವಿದ್ಯಾರ್ಥಿಗಳು ಹಾಗೂ ಪಾಲಕರ ಜೊತೆ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಮಾತುಕತೆ ನಡೆಸಿದರು.
ಉಕ್ರೇನ್ನಿಂದ ಮರಳಿದ ವಿದ್ಯಾರ್ಥಿಗಳು, ಪಾಲಕರ ಜೊತೆ ವಿಜಯಪುರ ಡಿಸಿ ಸಭೆ - ವಿಜಯಪುರದಲ್ಲಿ ಉಕ್ರೇನ್ನಿಂದ ಬಂದ ವಿದ್ಯಾರ್ಥಿಗಳು ಜೊತೆ ಸಭೆ ನಡೆಸಿದ ಡಿಸಿ ಪಿ.ಸುನೀಲ್ ಕುಮಾರ್
ಉಕ್ರೇನ್ನಿಂದ ಮರಳಿದ ವಿದ್ಯಾರ್ಥಿಗಳು ಮತ್ತು ಪಾಲಕರ ಜೊತೆ ಇಂದು ಜಿಲ್ಲಾಧಿಕಾರಿ ಸಭೆ ನಡೆಸಿದರು. ಈ ವೇಳೆ ವಿದ್ಯಾರ್ಥಿಗಳು ತಾವು ಮತ್ತೊಮ್ಮೆ ಉಕ್ರೇನ್ನಲ್ಲಿ ಕಲಿಯಲು ಇಷ್ಟಪಡುವುದಿಲ್ಲ, ಅದರ ಬದಲಿಗೆ ಭಾರತದ ಮೆಡಿಕಲ್ ಕಾಲೇಜುಗಳಲ್ಲಿ ಶಿಕ್ಷಣ ಮುಂದುವರೆಸಲು ಅವಕಾಶ ನೀಡಬೇಕೆಂದು ಮನವಿ ಮಾಡಿದರು.
ಉಕ್ರೇನ್ನಿಂದ ಬಂದ ವಿದ್ಯಾರ್ಥಿಗಳು ಮತ್ತು ಪಾಲಕರ ಜೊತೆ ವಿಜಯಪುರ ಡಿಸಿ ಸಭೆ
ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿದ್ಯಾರ್ಥಿಗಳು ಮತ್ತು ಪಾಲಕರನ್ನು ಕರೆದು ಮಾತನಾಡಿದ ಜಿಲ್ಲಾಧಿಕಾರಿಗಳು, ಮುಂದಿನ ಶೈಕ್ಷಣಿಕ ಭವಿಷ್ಯದ ಕುರಿತು ಚರ್ಚಿಸಿದರು. ಈ ಸಂದರ್ಭದಲ್ಲಿ ಬಹುತೇಕ ವಿದ್ಯಾರ್ಥಿಗಳು ಭಾರತದಲ್ಲಿ ತಮ್ಮ ಎಂಬಿಬಿಎಸ್ ವಿದ್ಯಾಭ್ಯಾಸ ಮುಂದುವರಿಸಲು ಅವಕಾಶ ನೀಡಬೇಕು ಎಂದು ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಡಿಸಿ, ಈ ಬಗ್ಗೆ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸುವುದಾಗಿ ತಿಳಿಸಿದರು.