ಕರ್ನಾಟಕ

karnataka

ETV Bharat / state

ಜಿಲ್ಲೆಯ 6 ಕಡೆಗೆ ಹೆಸರುಕಾಳು ಖರೀದಿ ಕೇಂದ್ರ ಸ್ಥಾಪಿಸಲು ಡಿಸಿ ಸೂಚನೆ - Vijayapura latest news

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಕೆಂದ್ರ ಸರ್ಕಾರವು ಪ್ರತಿ ಕ್ವಿಂಟಾಲ್‍ಗೆ 7,196 ರೂ.ಗಳನ್ನು ನಿಗದಿ ಮಾಡಿದೆ. ಪ್ರತಿ ಎಕರೆಗೆ 4 ಕ್ವಿಂಟಾಲ್ ಗರಿಷ್ಠ ಪ್ರಮಾಣ ಹಾಗೂ ಪ್ರತಿ ರೈತರಿಂದ ಗರಿಷ್ಠ 4 ಕ್ವಿಂಟಾಲ್ ಖರೀದಿ ಪ್ರಮಾಣ ನಿಗದಿಪಡಿಸಿ ಖರೀದಿಸಬೇಕು..

ವಿಜಯಪುರ
ವಿಜಯಪುರ

By

Published : Sep 21, 2020, 9:47 PM IST

ವಿಜಯಪುರ : ಜಿಲ್ಲೆಯ 6 ತಾಲೂಕು ಕೇಂದ್ರಗಳಲ್ಲಿ ಹೆಸರು ಕಾಳು ಖರೀದಿ ಕೇಂದ್ರ ಸ್ಥಾಪಿಸುವಂತೆ ಜಿಲ್ಲಾಧಿಕಾರಿ ಪಿ ಸುನೀಲ್‌ಕುಮಾರ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಕಾರ್ಯಪಡೆ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕನಿಷ್ಠ ಬೆಂಬಲ ಬೆಲೆಗಿಂತ ಕಡಿಮೆ ದರದಲ್ಲಿ ಹೆಸರು ಕಾಳು ಬೆಳೆಗಳು ಮಾರಾಟವಾಗುತ್ತಿರುವುದರಿಂದ ಜಿಲ್ಲೆಯ 6 ತಾಲೂಕುಗಳಾದ ವಿಜಯಪುರ, ಬ.ಬಾಗೇವಾಡಿ, ಮುದ್ದೇಬಿಹಾಳ, ತಾಳಿಕೋಟೆ, ಸಿಂದಗಿ ಹಾಗೂ ಇಂಡಿಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಿ ವ್ಯವಸ್ಥಿತವಾಗಿ ನಿರ್ವಹಿಸುವಂತೆ ಸೂಚಿಸಿದರು.

ಜಿಲ್ಲೆಯಲ್ಲಿ 6,712 ಹೆಕ್ಟೇರ್ ಕ್ಷೇತ್ರದಲ್ಲಿ ಹೆಸರು ಕಾಳು ಬಿತ್ತನೆಯಾಗಿದೆ. ಕೃಷಿ ಇಲಾಖೆಯ ಮಾಹಿತಿ ಪ್ರಕಾರ ಅಂದಾಜು 50,340 ಕ್ವಿಂಟಲ್ ಇಳುವರಿ ಬರಬಹುದು ಎಂದು ನಿರೀಕ್ಷಿಸಲಾಗಿದೆ. ಜಿಲ್ಲೆಯ ಯಾವ ರೈತರಿಗೂ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದರು.

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಕೆಂದ್ರ ಸರ್ಕಾರವು ಪ್ರತಿ ಕ್ವಿಂಟಾಲ್‍ಗೆ 7,196 ರೂ.ಗಳನ್ನು ನಿಗದಿ ಮಾಡಿದೆ. ಪ್ರತಿ ಎಕರೆಗೆ 4 ಕ್ವಿಂಟಾಲ್ ಗರಿಷ್ಠ ಪ್ರಮಾಣ ಹಾಗೂ ಪ್ರತಿ ರೈತರಿಂದ ಗರಿಷ್ಠ 4 ಕ್ವಿಂಟಾಲ್ ಖರೀದಿ ಪ್ರಮಾಣ ನಿಗದಿಪಡಿಸಿ ಖರೀದಿಸಬೇಕು. ರೈತರ ಹೆಸರಿನ ಆಧಾರ ಸಂಖ್ಯೆ ಜೋಡಣೆಗೊಂಡ ಬ್ಯಾಂಕ್ ಖಾತೆಗೆ ಮಾತ್ರ ಉತ್ಪನ್ನದ ಮೌಲ್ಯವು ಡಿಬಿಐ ಮೂಲಕ ಜಮಾ ಆಗುವಂತೆ ಪಾವತಿ ಮಾಡಬೇಕು ಎಂದು ಸೂಚಿಸಿದರು.

ಹೆಸರುಕಾಳ ಖರೀದಿ ಕೇಂದ್ರಗಳಲ್ಲಿ ರೈತರ ಹೆಸರಿನಲ್ಲಿ ವರ್ತಕರು ತರುವ ಹೆಸರುಕಾಳು ಖರೀದಿಸದಂತೆ ಹಾಗೂ ಖರೀದಿ ಸಂಸ್ಥೆಗಳ ಯಾವುದೇ ರೀತಿಯ ದುರುಪಯೋಗ ಆಗದಂತೆ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಅದರಂತೆ ಬೆಂಬಲ ಬೆಲೆ ಯೋಜನೆ ಮಾರ್ಗಸೂಚಿ ಹಾಗೂ ಆವರ್ತನಿಧಿ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಹಾಗೂ ಕೊರೊನಾ ಹಿನ್ನೆಲೆ ಸಾಮಾಜಿಕ ಅಂತರ ನಿಯಮ ಪಾಲಿಸಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ABOUT THE AUTHOR

...view details