ವಿಜಯಪುರ: ಕೊರೊನಾ ಎರಡನೇ ಅಲೆ ಜಿಲ್ಲೆಯಲ್ಲಿ ದಿನೇ ದಿನೆ ಹೆಚ್ಚಾಗಿ ಹರಡುತ್ತಿದೆ. ಕಳೆದ ವರ್ಷ ಕೋವಿಡ್ ಸೋಂಕಿತರ ಚಿಕಿತ್ಸೆಯಲ್ಲಿ ಖಾಸಗಿ ಆಸ್ಪತ್ರೆಗಳು ಸುಲಿಗೆ ನಡೆಸಿರುವ ಆರೋಪ ಕೇಳಿ ಬಂದ ಕಾರಣ ಈ ಬಾರಿ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದೆ. ಸರ್ಕಾರಿ ಮಾರ್ಗಸೂಚಿಯಂತೆಯೇ ಸೋಂಕಿತರಿಗೆ ಚಿಕಿತ್ಸೆ ನೀಡುವುದು ಸೇರಿದಂತೆ ಹಲವು ನಿಬಂಧನೆಗಳನ್ನು ಖಾಸಗಿ ಆಸ್ಪತ್ರೆಗಳ ಮೇಲೆ ಹೇರಿದೆ.
ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆ - ಪ್ರತಿಕ್ರಿಯೆ ಸೋಂಕಿತರ ಚಿಕಿತ್ಸೆ ಹೆಸರಿನಲ್ಲಿ ಖಾಸಗಿ ಆಸ್ಪತ್ರೆಗಳು ಸುಲಿಗೆ ನಡೆಸಿರುವ ಆರೋಪಗಳು ಕೇಳಿ ಬಂದಿದ್ದವು. ಇದನ್ನು ನಿಯಂತ್ರಿಸಲು ಜಿಲ್ಲಾಡಳಿತ ವಾಕ್ಸಿನ್ ಜಿಲ್ಲಾದ್ಯಂತ ಜನರಿಗೆ ನೀಡುತ್ತಿದೆ. ಆದರೂ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ, ಚಿಕಿತ್ಸೆಗೆ ಜಿಲ್ಲಾಸ್ಪತ್ರೆ ಸೇರಿ 17ಕ್ಕೂ ಹೆಚ್ಚು ಖಾಸಗಿ ಆಸ್ಪತ್ರೆಗೆ ಅನುಮತಿ ನೀಡಿದೆ. ಈ ಬಾರಿ ರೋಗಿಗಳಿಂದ ಚಿಕಿತ್ಸೆ ನೆಪದಲ್ಲಿ ಹಣ ಸುಲಿಗೆಯಾಗದಂತೆ ಸಮಿತಿ ರಚನೆ ಮಾಡಿ ಆ ಮೂಲಕ ರೋಗಿಗಳ ಹಿತ ಕಾಪಾಡಲು ವ್ಯವಸ್ಥೆ ಮಾಡಲಾಗಿದೆ. ರೋಗಿಗಳ ಸಂಬಂಧಿಕರಿಂದ ದೂರುಗಳು ಕೇಳಿ ಬಂದರೆ ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳುವ ಎಚ್ಚರಿಕೆ ಸಹ ನೀಡಿದೆ.
45 ವರ್ಷ ಮೇಲ್ಪಟ್ಟವರಿಂದ ಹಿಡಿದು ಎಲ್ಲರಿಗೂ ವಾಕ್ಸಿನ್ ನೀಡುವ ಸಲುವಾಗಿ ಕೆಲ ವಾರ ಖಾಸಗಿ ಆಸ್ಪತ್ರೆಗಳಿಗೂ ನಿಗದಿತ ದರ ನಿಗದಿ ಮಾಡಿ ಔಷಧ ನೀಡಲು ಅನುಮತಿ ನೀಡಿತ್ತು. ಅದರಲ್ಲಿಯೂ ಹಣ ಸುಲಿಗೆ ನಡೆದಿದೆ ಎನ್ನುವ ಆರೋಪಗಳು ಕೇಳಿ ಬಂದ ಕಾರಣ, ಜಿಲ್ಲಾಡಳಿತ ಈಗ ದೇವಸ್ಥಾನ, ಆರೋಗ್ಯ ಉಪಕೇಂದ್ರಗಳಲ್ಲಿ ಸೇರಿ ಕೆಲವೆಡೆ ಲಸಿಕೆ ಹಾಕುವ ಕಾರ್ಯ ಮಾಡುತ್ತಿದೆ. ಇದರ ಜತೆ ಕೋವಿಡ್ ಪಾಸಿಟಿವ್ ರೋಗಿಗಳ ಚಿಕಿತ್ಸೆಗೂ ಎಲ್ಲ ರೀತಿಯ ವ್ಯವಸ್ಥೆ ಮಾಡಿಕೊಳ್ಳುತ್ತಿದೆ. ಈ ಬಗ್ಗೆ ಸಾರ್ವಜನಿಕರು ಸಹ ಜಿಲ್ಲಾಡಳಿತಕ್ಕೆ ಕೆಲ ಸಲಹೆ ಸೂಚನೆಗಳನ್ನು ನೀಡಿದ್ದಾರೆ.
ಇದನ್ನೂ ಓದಿ:ಕೋವಿಡ್ ಎರಡನೇ ಅಲೆ ನಿಯಂತ್ರಿಸಲು ಬಳ್ಳಾರಿ ಜಿಲ್ಲಾಡಳಿತ ಸಿದ್ಧ
ಮಹಾರಾಷ್ಟ್ರ ಸೇರಿದಂತೆ ವಿವಿಧೆಡೆಗಳಿಂದ ಬಂದವರಿಗೆ, ರೋಗ ಲಕ್ಷಣ ಕಂಡು ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯಗೊಳಿಸಲಾಗಿದೆ. ಈ ಮೂಲಕ ನಿತ್ಯ 4,000 ಸಾವಿರ ಜನರಿಗೆ ಸ್ವ್ಯಾಬ್ ಟೆಸ್ಟ್ ಮಾಡುವ ಗುರಿ ಇಟ್ಟುಕೊಂಡು ರೋಗ ನಿಯಂತ್ರಣಕ್ಕೆ ತರಲು ಜಿಲ್ಲಾಡಳಿತ ಪ್ರಯತ್ನಿಸುತ್ತಿದೆ. ಸಾರ್ವಜನಿಕರು ಸಹ ಜಿಲ್ಲಾಡಳಿತಕ್ಕೆ ಸಹಕರಿಸುವ ಕೆಲಸ ಮಾಡಬೇಕಾಗಿದೆ.