ವಿಜಯಪುರ : ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಜೂನ್ 30 ರಂದು ಒಂದೇ ದಿನದಲ್ಲಿ 66.670 ಮಾನವ ದಿನ ಸೃಜನೆ ಮಾಡುವ ಮೂಲಕ ಸಾಧನೆ ಮಾಡಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ ತಿಳಿಸಿದರು.
ರಾಷ್ಟೀಯ ಉದ್ಯೋಗ ಖಾತ್ರಿ ಯೋಜನೆಯಡಿ ಹೊನವಾಡ ಕೆರೆ ಹೂಳೆತ್ತುವ ಕಾಮಗಾರಿ ಪರಿಶೀಲಿಸಿದ ನಂತರ ಮಾತನಾಡಿದ ಅವರು, ಜಿಲ್ಲೆಯಲ್ಲಿ ಒಂದೇ ದಿನದಲ್ಲಿ 66.670 ಮಾನವ ದಿನ ಸೃಜನೆ ಮಾಡಿರುವುದು ಐತಿಹಾಸಿಕ ದಾಖಲೆ. ಜಿಲ್ಲೆಯಲ್ಲಿ ಒಂದು ವರ್ಷಕ್ಕೆ 50 ಲಕ್ಷ ಮಾನವ ದಿನ ಸೃಜನೆಯ ಗುರಿ ಹೊಂದಲಾಗಿದೆ. ಒಂದೇ ದಿನದಲ್ಲಿ ಮೇಲಿನ ಸಾಧನೆ ಮಾಡಲಾಗಿದ್ದು, ಜೂನ್ ತಿಂಗಳ ಒಂದರಲ್ಲೇ 5.72 ಲಕ್ಷ ಮಾನವ ದಿನ ಸೃಜನೆಯ ಗುರಿ ಹೊಂದಿ, 8.57 ಲಕ್ಷ ಮಾನವ ದಿನ ಸೃಜನೆಯ ಸಾಧನೆ ಮಾಡಿ ಶೇ. 150 ರಷ್ಟು ಸಾಧನೆ ಮಾಡಲಾಗಿದೆ ಎಂದು ಅವರು ತಿಳಿಸಿದರು.