ಕರ್ನಾಟಕ

karnataka

ETV Bharat / state

ರೈತ ವಿರೋಧಿ ಕಾಯ್ದೆ ಜಾರಿ ವಿರೋಧಿಸಿ ವಿಜಯಪುರದಲ್ಲಿ ಪ್ರತಿಭಟನೆ - Vijayapura latest news

ವಿಜಯಪುರದಲ್ಲಿ ಎಪಿಎಂಸಿ ಕಾಯ್ದೆ ತಿದ್ದುಪಡಿ, ಭೂ ಸುಧಾರಣಾ ಕಾಯ್ದೆ, ವಿದ್ಯುತ್ ಕಾಯ್ದೆ ತಿದ್ದುಪಡಿ ವಿರೋಧಿಸಿ ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿಯ ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸಿದ್ದಾರೆ.

Protest
ಪ್ರತಿಭಟನೆ

By

Published : Nov 5, 2020, 3:29 PM IST

ವಿಜಯಪುರ:ಕೇಂದ್ರ ಹಾಗೂ ರಾಜ್ಯ ಸರ್ಕಾರದ ರೈತರ ವಿರೋಧಿ ನೀತಿ ಜಾರಿ ಹಿಂಪಡೆಯುವಂತೆ ಒತ್ತಾಯಿಸಿ ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ನಗರದ ಅಂಬೇಡ್ಕರ್ ವೃತ್ತದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿ, ಎಪಿಎಂಸಿ ಕಾಯ್ದೆ ತಿದ್ದುಪಡಿ, ಭೂ ಸುಧಾರಣಾ ಕಾಯ್ದೆ, ವಿದ್ಯುತ್ ಕಾಯ್ದೆ ತಿದ್ದುಪಡಿಗಳು ರೈತ ವಿರೋಧಿಯಾಗಿವೆ. ಕಾಯ್ದೆಗಳ ತಿದ್ದುಪಡಿಯಿಂದ ರೈತರು ಸಂಕಷ್ಟಕ್ಕೆ ಸಿಲುಕುವಂತಾಗುತ್ತದೆ‌. ಅಲ್ಲದೇ ಸರ್ಕಾರ ರೈತರ ಭೂಮಿ ಖರೀದಿಗೆ ಮುಕ್ತ ಅವಕಾಶ ಕಲ್ಪಿಸಿದರೆ ರೈತರ ಭೂಮಿಗಳು ಕಾರ್ಪೊರೇಟ್ ಸಂಸ್ಥೆಗಳ ಪಾಲಾಗುತ್ತದೆ ಎಂದು ಪ್ರತಿಭಟನಾಕಾರರು ಆಕ್ರೋಶ ಹೊರ ಹಾಕಿದರು.

ರೈತರ ವಿರೋಧಿ ಕಾಯ್ದೆ ಜಾರಿ ವಿರೋಧಿಸಿ ಪ್ರತಿಭಟನೆ

ಕೊರೊನಾ ವೈರಸ್​ ಭೀತಿ ಸಮಯದಲ್ಲಿ ರೈತರ ಪರವಾಗಿ ನಿಲ್ಲಬೇಕಿದ್ದ ಸರ್ಕಾರ ಇಂದು ರೈತರ ಕಣ್ಣಿಗೆ ಮಣ್ಣು ಹಾಕುವ ಕೆಲಸವನ್ನು ಮಾಡುತ್ತಿದೆ. ಅಲ್ಲದೇ ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ಅನೇಕ ಕೂಲಿ‌ ಕಾರ್ಮಿಕರು ಉದ್ಯೋಗ ಕಳೆದು ಕೊಳ್ಳುವಂತಾಗಿದೆ ಎಂದು ಕಿಡಿಕಾರಿದರು.

ಇನ್ನೂ ವಿದ್ಯುತ್ ಕಾಯ್ದೆ ಜಾರಿ ಮಾಡುವುರಿಂದ ರೈತರು ಕೃಷಿ ಚಟುವಟಿಗಳಿಗೆ ಬಳಸುವ ವಿದ್ಯುತ್ ಬಳಕೆಗೆ ಬಿಲ್​ ಕಟ್ಟಬೇಕಾಗುತ್ತದೆ. ಇದು ರೈತರಗೆ ಹೊರೆಯಾಗುತ್ತದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಎಲ್ಲ ಕಾಯ್ದೆಗಳ ತಿದ್ದುಪಡಿಯಿಂದ ಹಿಂದೆ ಸರಿಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಮೂಲಕ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ABOUT THE AUTHOR

...view details