ತುಮಕೂರು: ಭೂ ಸುಧಾರಣೆ, ಎಪಿಎಂಸಿ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರ ಪ್ರತಿಭಟನೆ - ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ವಿರೋಧಿಸಿ ವಿಜಯಪುರ ರೈತರ ಪ್ರತಿಭಟನೆ
ಭೂ ಸುಧಾರಣಾ ತಿದ್ದುಪಡಿ ಕಾಯ್ದೆ, ವಿದ್ಯುತ್ ಖಾಸಗೀಕರಣ, ಎಪಿಎಂಸಿ ತಿದ್ದುಪಡಿ ಕಾಯ್ದೆ, ಕಾರ್ಮಿಕ ನೀತಿ ಕಾಯ್ದೆ ವಿರೋಧಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿತು.
ಸುಗ್ರೀವಾಜ್ಞೆಯ ಮೂಲಕ ಜಾರಿಗೆ ತಂದಿರುವ ಈ ಕಾಯ್ದೆಗಳು ರೈತರ ಪಾಲಿಗೆ ಮರಣಶಾಸನವಾಗಿವೆ. ಇವುಗಳಿಂದ ರೈತರು ಜೀವನ ನಡೆಸಲು ಕಷ್ಟವಾಗುತ್ತದೆ. ಅಲ್ಪಸ್ವಲ್ಪ ಜಮೀನು ಹೊಂದಿರುವ ರೈತರು ಅವುಗಳನ್ನು ಮಾರಾಟ ಮಾಡಿ ಪ್ರಬಲರ ಕೈಯಡಿ ಜೀತದಾಳುಗಳಾಗಿ ಜೀವನ ಸಾಗಿಸಬೇಕಾಗುತ್ತದೆ. ಹಾಗಾಗಿ ಈ ಕಾಯ್ದೆಗಳನ್ನು ಕೈಬಿಡುವಂತೆ ಒತ್ತಾಯಿಸಿ ರೈತರು ಪ್ರತಿಭಟನೆ ಮಾಡಿದರು.
ಈ ವೇಳೆ ಮಾತನಾಡಿದ ಹಸಿರು ಸೇನೆಯ ಜಿಲ್ಲಾಧ್ಯಕ್ಷ ಹೆಚ್. ಡಿ. ರಾಮಲಿಂಗಯ್ಯ, ಸರ್ಕಾರ ಜಾರಿಗೆ ತಂದಿರುವ ಕಾಯ್ದೆಗಳು ರೈತ ವಿರೋಧಿಯಾಗಿವೆ. ಈ ಅಂಶವನ್ನು ಗಮನದಲ್ಲಿಟ್ಟುಕೊಂಡು ಈ ಹಿಂದೆ ಇದ್ದಂತಹ ಕಾಯ್ದೆಗಳನ್ನೇ ಜಾರಿಗೆ ತರಬೇಕು ಒತ್ತಾಯಿಸಿದರು.