ಕರ್ನಾಟಕ

karnataka

ETV Bharat / state

ವಿಜಯಪುರ: ಕೊರೊನಾ ಮೂರನೇ ಅಲೆಗೆ ಬಾಣಂತಿ ಬಲಿ - pregnant lady was died by corona

ವಿಜಯಪುರ ಜಿಲ್ಲೆಯಲ್ಲಿ ಶುಕ್ರವಾರ 106 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಬಾಣಂತಿಯೋರ್ವರು ಸೋಂಕಿಗೆ ಬಲಿಯಾಗಿದ್ದಾರೆ.

ಕೊರೊನಾ
ಕೊರೊನಾ

By

Published : Jan 14, 2022, 7:33 PM IST

Updated : Jan 14, 2022, 8:17 PM IST

ವಿಜಯಪುರ:ಕೊರೊನಾ ಮೂರನೇ ಅಲೆಯಲ್ಲಿ ಇದೇ ಮೊದಲ ಬಾರಿಗೆ ಜಿಲ್ಲೆಯಲ್ಲಿ ಒಂದೇ ದಿನ ಪಾಸಿಟಿವ್​​ ಪ್ರಕರಣಗಳ ಸಂಖ್ಯೆ 100ರ ಗಡಿದಾಟಿದ್ದು, ಬಾಣಂತಿಯೋರ್ವರು ಸಾವನ್ನಪ್ಪಿದ್ದಾರೆ.

ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ ಕೊರೊನಾ ಕಾರಣದಿಂದ ಮೃತಪಟ್ಟಿದ್ದಾರೆ.‌ ಇವರು ಜ. 8ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.ಆದರೆ ತೀವ್ರ ಉಸಿರಾಟ ತೊಂದರೆಯಿಂದ ಜ.11ರಂದು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಶುಕ್ರವಾರ ಜಿಲ್ಲೆಯಲ್ಲಿ 106 ಕೊರೊನಾ ಸೋಂಕಿತರು ಪತ್ತೆಯಾಗಿದ್ದು,‌ ಗುರುವಾರ 66 ಪ್ರಕರಣಗಳು ದೃಢಪಟ್ಟಿದ್ದವು.‌ ಜನವರಿ 1 ರಿಂದ ರಾಜ್ಯದಲ್ಲಿ ಕೋವಿಡ್ ಮೂರನೇ ಅಲೆ ಆರಂಭಗೊಳ್ಳುತ್ತಿದ್ದಂತೆ ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರತೊಡಗಿದೆ. ಮಕ್ಕಳೂ ಸೇರಿ ಇಂದು ಜಿಲ್ಲೆಯಲ್ಲಿ 131 ಕೊರೊನಾ ಪ್ರಕರಣಗಳು ವರದಿಯಾಗಿವೆ.

ಇದನ್ನೂ ಓದಿ: ರಾಜ್ಯದಲ್ಲಿಂದು 28,723 ಕೋವಿಡ್​ ಕೇಸ್​ ಪತ್ತೆ: ಬೆಂಗಳೂರಲ್ಲೇ 20 ಸಾವಿರ ಮಂದಿಗೆ ಸೋಂಕು

Last Updated : Jan 14, 2022, 8:17 PM IST

ABOUT THE AUTHOR

...view details