ಕರ್ನಾಟಕ

karnataka

ETV Bharat / state

ವಿಜಯಪುರ: ರಾಜ್ಯ, ಕೇಂದ್ರ ಸರ್ಕಾರಗಳ ಜನ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ... - Protest against condemnation of anti-people policy

ಕೊರೊನಾ ಸಂಕಷ್ಟದ ಸಮಯದಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಜನ ವಿರೋಧಿ ನೀತಿ ಅನುಸರಿಸುತ್ತಿವೆ ಎಂದು ಜಂಟಿ ಕ್ರಿಯಾ ಸಮಿತಿಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

Vijayapura
ಪ್ರತಿಭಟನೆ

By

Published : Sep 5, 2020, 11:23 PM IST

ವಿಜಯಪುರ: ಕೊರೊನಾ ಸಂಕಷ್ಟದ ಸಮಯದಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಜನ ವಿರೋಧಿ ನೀತಿ ಅನುಸರಿಸುತ್ತಿವೆ ಎಂದು ಆರೋಪಿಸಿ ಜಂಟಿ ಕ್ರಿಯಾ ಸಮಿತಿಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ನಗರದ ಜಿಲ್ಲಾಧಿಕಾರಿ ಕಛೇರಿ ಮುಂಭಾಗದಲ್ಲಿ ಪ್ರತಿಭಟನಾಕಾರು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿ ಇಡೀ ದೇಶವೇ ಕೊರೊನಾ ಎಂಬ ಹೆಮ್ಮಾರಿಯಲ್ಲಿ ಮುಳುಗಿದೆ. ಆದ್ರೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಸಂಕಷ್ಟದಲ್ಲಿ ಜನರ ಪರವಾಗಿ ನಿಲ್ಲದೆ ಜನ ವಿರೋಧಿ ಹಾಗೂ ರೈತ ವಿರೋಧಿ ವರ್ತನೆ ಅನುಸರಿಸುತ್ತಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಜಂಟಿ ಕ್ರಿಯಾ ಸಮಿತಿಯ ಕಾರ್ಯಕರ್ತರಿಂದ ಪ್ರತಿಭಟನೆ

ಅನೇಕ ಜನರು ಉದ್ಯೋಗ ಕಳೆದುಕೊಳ್ಳುವಂತಾಗಿದೆ. ಬಡ ಜನತೆ ದುಡಿಮೆಯಿಲ್ಲದೆ ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಇತ್ತ ಸರ್ಕಾರ ಹಲವು ಇಲಾಖೆಗಳ ಖಾಸಗೀಕರಣದ ಮೂಲಕ ಕಾರ್ಪೋರೇಟ್ ಕಂಪನಿಗಳ ಕೈಗೆ ದೇಶವನ್ನು ಕೊಡಲು ಹೊರಟಿದೆ ಎಂದು ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದರು.

ಸಂಕಷ್ಟದಲ್ಲಿರುವ ಕುಟುಂಬಗಳಿಗೆ 200 ದಿನಗಳ ಕಾಲ ಉದ್ಯೋಗ, ಆಹಾರ ಕಿಟ್ ಸೇರಿದಂತೆ ಹಲವು ಬೇಡಿಕೆಗಳಿಗೆ ಆಗ್ರಹಿಸಿ ಜಿಲ್ಲಾಧಿಕಾರಿ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ABOUT THE AUTHOR

...view details