ವಿಜಯಪುರ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಖಾಲಿ ಇರುವ ಗ್ರಾಮ ಪಂಚಾಯತ್ನ 13 ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ನೇಮಕಾತಿ ನಡೆಸಲಾಗುವುದು. ಆಸಕ್ತಿ ಹೊಂದಿರುವ ಸೂಕ್ತ ಮತ್ತು ಸ್ಥಳೀಯ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಖಾಲಿ ಹುದ್ದೆಗಳ ಮಾಹಿತಿ: ಜಿಲ್ಲೆಯಲ್ಲಿ ಖಾಲಿ ಇರುವ 13 ಹುದ್ದೆಗಳ ಮಾಹಿತಿ ಇಲ್ಲಿದೆ.. ವಿಜಯಪುರ ತಾಲೂಕಿನಲ್ಲಿ 1, ಇಂಡಿ ತಾಲೂಕಿನಲ್ಲಿ 3, ನಿಡಗುಂದಿ ತಾಲೂಕಿನಲ್ಲಿ 3, ಮುದ್ದೇಬಿಹಾಳ ತಾಲೂಕಿನಲ್ಲಿ 1, ಸಿಂದಗಿ ತಾಲೂಕಿನಲ್ಲಿ 3 ಹಾಗೂ ಕನ್ನೊಳಿ ಮತ್ತು ಕೊಣ್ಣೂರ ಗ್ರಾಮ ಪಂಚಾಯಿತಿಯಲ್ಲಿ ತಲಾ ಒಂದು ಹುದ್ದೆಗಳು ಖಾಲಿ ಇವೆ.
ವಿದ್ಯಾರ್ಹತೆ: ಅಭ್ಯರ್ಥಿಗಳು ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು. ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪ್ರಮಾಣಪತ್ರ ಪಡೆದಿರಬೇಕು. ಕನಿಷ್ಠ 3 ತಿಂಗಳ ಕಂಪ್ಯೂಟರ್ ಕೋರ್ಸ್ ಉತ್ತೀರ್ಣರಾಗಿರಬೇಕು. ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪದವಿ ಪಡದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸದಿದ್ದಲ್ಲಿ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ಹುದ್ದೆಗೆ ಪರಿಗಣಿಸಲಾಗುತ್ತದೆ.
ವಯೋಮಿತಿ: ಕನಿಷ್ಠ 18 ವರ್ಷ, ಗರಿಷ್ಠ 35 ವರ್ಷ ವಯೋಮಿತಿ. ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪ.ಜಾತಿ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷದವರೆಗೆ ವಯೋಮಿತಿ ಸಡಿಲಿಕೆ ಇದೆ.
ಆಯ್ಕೆ:ಮೆರಿಟ್ ಆಧಾರದ ಮೇಲೆ ದಾಖಲಾತಿ ಪರಿಶೀಲನೆ ಬಳಿಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.