ಕರ್ನಾಟಕ

karnataka

ETV Bharat / state

ವಿಜಯಪುರ: ಕೊರೊನಾ ನಿಯಂತ್ರಣ ಕ್ರಮಗಳ ಕುರಿತು ಪ್ರಗತಿ ಪರಿಶೀಲಿಸಿದ ಪ್ರಾದೇಶಿಕ ಆಯುಕ್ತ - Aditya Amlan Biswas

ವಿಜಯಪುರ ನಗರದ ನೂತನ ಪ್ರವಾಸ ಮಂದಿರದಲ್ಲಿ ಕೋವಿಡ್-19 ಕುರಿತು ಜಿಲ್ಲಾಡಳಿತದ ವತಿಯಿಂದ ಕೈಗೊಳ್ಳಲಾದ ಕ್ರಮಗಳ ಬಗ್ಗೆ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತ ಆದಿತ್ಯ ಆಮ್ಲನ್ ಬಿಸ್ವಾಸ್ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

Vijayapura Regional Commissioner inspected the progress of Corona control measures
ವಿಜಯಪುರ: ಕೊರೊನಾ ನಿಯಂತ್ರಣ ಕ್ರಮಗಳ ಪ್ರಗತಿ ಪರಿಶೀಲನೆ ನಡೆಸಿದ ಪ್ರಾದೇಶಿಕ ಆಯುಕ್ತ

By

Published : Apr 16, 2020, 9:19 AM IST

ವಿಜಯಪುರ:ನಗರದಲ್ಲಿ ಇತ್ತೀಚೆಗೆ ಕಂಡುಬಂದ ಕೊರೊನಾ ಸೋಂಕಿತರೊಂದಿಗೆ ಸಂಪರ್ಕ ಹೊಂದಿದವರನ್ನು ಗುರುತಿಸಲು ತೀವ್ರ ತನಿಖಾ ಕ್ರಮ ಕೈಗೊಳ್ಳುವಂತೆ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತ ಆದಿತ್ಯ ಆಮ್ಲನ್ ಬಿಸ್ವಾಸ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ನೂತನ ಪ್ರವಾಸ ಮಂದಿರದಲ್ಲಿ ಕೋವಿಡ್-19 ಕುರಿತು ಜಿಲ್ಲಾಡಳಿತದ ವತಿಯಿಂದ ಕೈಗೊಳ್ಳಲಾದ ಕ್ರಮಗಳ ಬಗ್ಗೆ ಪ್ರಗತಿ ಪರಿಶೀಲನೆ ನಡೆಸಿದ ಅವರು, ನಗರದಲ್ಲಿ ಕೊರೊನಾ ಸೋಂಕಿತರು ದೃಢಪಟ್ಟ ಹಿನ್ನೆಲೆಯಲ್ಲಿ ಕಂಟೇನ್ಮೆಂಟ್ ಮತ್ತು ಬಫರ್ ಜೋನ್ ವ್ಯಾಪ್ತಿಯಲ್ಲಿ ಜ್ವರ, ಕೆಮ್ಮು, ನೆಗಡಿ ಮತ್ತು ತೀವ್ರತರ ಉಸಿರಾಟದ ತೊಂದರೆ ಅನುಭವಿಸುತ್ತಿರುವವರನ್ನು ಗುರುತಿಸಲು ಯೋಜನಾಬದ್ಧವಾಗಿ ಕಾರ್ಯನಿರ್ವಹಿಸುವಂತೆ ತಿಳಿಸಿದರು. ಕೊರೊನಾ ಸೋಂಕಿತ ಜನರೊಂದಿಗೆ ಸಂಪರ್ಕದಲ್ಲಿದ್ದವರನ್ನು ಮತ್ತು ಕೊರೊನಾ ಸೋಂಕು ತಗುಲಿರುವ ಕುರಿತು ಮೂಲ ಪತ್ತೆ ಹಚ್ಚಲು ತನಿಖೆಗಳನ್ನು ಚುರುಕುಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಕೊರೊನಾ ಸೋಂಕಿತರೊಂದಿಗೆ ಸಾಮಾಜಿಕ ಮತ್ತು ಭೌಗೋಳಿಕ ಸಂಪರ್ಕಗಳನ್ನು ಕೂಲಂಕಷವಾಗಿ ಪರಿಶೀಲಿಸಬೇಕು. ಕಂಟೇನ್ಮೆಂಟ್ ಭಾಗದಲ್ಲಿ 60 ವರ್ಷ ಮೀರಿರುವ ವ್ಯಕ್ತಿಗಳನ್ನು ಗುರುತಿಸಬೇಕು. ಬಫರ್ ಜೋನ್ ವ್ಯಾಪ್ತಿಯಲ್ಲಿ ಯಾರಾದರೂ ಜ್ವರ, ಕೆಮ್ಮು, ನೆಗಡಿ ಮತ್ತು ತೀವ್ರ ಉಸಿರಾಟದ ತೊಂದರೆಯಿಂದ ಬಳಲಿ ಈ ಕುರಿತು ಯಾವುದೇ ಔಷಧಿಯ ಅಂಗಡಿಗಳಲ್ಲಿ ಇದಕ್ಕೆ ಸಂಬಂಧಪಟ್ಟ ಔಷಧಿ, ಮಾತ್ರೆ ಖರೀದಿ ಬಗ್ಗೆ ತೀವ್ರ ನಿಗಾ ಇಡಬೇಕು. ಪ್ರತಿ ಔಷಧಿ ಅಂಗಡಿಗಳಿಂದ ಇ-ಮೇಲ್ ಮೂಲಕ ನಿಗದಿತ ನಮೂನೆಯಲ್ಲಿ ಔಷಧಿ ಮಾರಾಟದ ಬಗ್ಗೆ, ಔಷಧಿ ಖರೀದಿಸಿದ ವ್ಯಕ್ತಿ, ಔಷಧಿ ಸೂಚಿಸಿರುವ ವೈದ್ಯರ ಮಾಹಿತಿಗಳ ಬಗ್ಗೆ ಅಂಕಿ ಅಂಶಗಳನ್ನು ತರಿಸಿಕೊಳ್ಳಬೇಕು ಎಂದು ತಿಳಿಸಿದರು.

ಕೊರೊನಾ ಮಾತ್ರವಲ್ಲದೇ, ಹೆಚ್‌ಐವಿ ಪಾಸಿಟಿವ್, ಕುಷ್ಠರೋಗ ಮತ್ತು ಇತರೆ ಕಾಯಿಲೆ ಇರುವಂತಹ ವ್ಯಕ್ತಿಗಳ ಬಗ್ಗೆಯೂ ತೀವ್ರ ನಿಗಾ ಇಡಬೇಕು. ಜಿಲ್ಲೆಯಲ್ಲಿ ಆಗುವಂತಹ ಪ್ರತಿಯೊಂದು ಸಹಜ ಸಾವಿನ ಕುರಿತಂತೆ ಸಂಬಂಧಪಟ್ಟ ವೈದ್ಯಕೀಯ ತಜ್ಞರಿಂದ ದೃಢೀಕರಣಗೊಳಿಸುವ ಕ್ರಮ ಜಾರಿಗೊಳಿಸಬೇಕು. ಕೊರೊನಾ ನಿಯಂತ್ರಣದಲ್ಲಿ ಮುಂಚೂಣಿ ಕರ್ತವ್ಯದಲ್ಲಿರುವ ಅಧಿಕಾರಿಗಳು, ಸಿಬ್ಬಂದಿಗಳು ಅವಶ್ಯಕ ಮುನ್ನೆಚ್ಚರಿಕೆ ಮತ್ತು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಪ್ರಾದೇಶಿಕ ಆಯುಕ್ತರು ಸೂಚನೆ ನೀಡಿದರು.

ABOUT THE AUTHOR

...view details