ವಿಜಯಪುರ: ಭೀಮಾ ನದಿ ಪ್ರವಾಹದಿಂದ ನಲುಗಿ ಹೋಗಿರುವ ಇಂಡಿ ತಾಲೂಕಿನ ಅಗರಖೇಡ ಗ್ರಾಮಕ್ಕೆ ಸಚಿವೆ ಶಶಿಕಲಾ ಜೊಲ್ಲೆ ಭೇಟಿ ನೀಡಿದ್ದು, ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದಿರುವ ಸಂತ್ರಸ್ತ ಮಹಿಳೆಯರ ಸಮಸ್ಯೆ ಆಲಿಸಿದರು.
ಮಹಾರಾಷ್ಟ್ರದಿಂದ ಭಾರೀ ಪ್ರಮಾಣದಲ್ಲಿ ಭೀಮಾನದಿಗೆ ನೀರು ಹರಿಬಿಟ್ಟಿರುವ ಹಿನ್ನೆಲೆಯಲ್ಲಿ ನದಿ ತೀರದ 8 ಸೇತುವೆಗಳು ಮುಳುಗಡೆಯಾಗಿದೆ. ಪ್ರವಾಹ ಪೀಡಿತರನ್ನು ವಿವಿಧೆಡೆ ಕಾಳಜಿ ಕೇಂದ್ರದಲ್ಲಿ ಇರಿಸಲಾಗಿದೆ. ಹೀಗಾಗಿ, ನಿರಾಶ್ರಿತ ಮಹಿಳೆಯರ ಸಮಸ್ಯೆಯನ್ನು ಆಲಿಸಲು ಸಚಿವೆ ಶಶಿಕಲಾ ಜೊಲ್ಲೆ ಅಗರಖೇಡ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿದ್ದರು. ಈ ವೇಳೆ ಸಂತ್ರಸ್ತರು ಸಚಿವೆಯ ಎದುರು ಅಳಲು ತೋಡಿಕೊಂಡಿದ್ದು, ನಮ್ಮನ್ನು ಗ್ರಾಮದಿಂದ ಸುರಕ್ಷಿತವಾಗಿ ಸ್ಥಳಾಂತರ ಮಾಡಬೇಕು ಎಂದು ಒತ್ತಾಯಿಸಿದರು.