ಕರ್ನಾಟಕ

karnataka

ETV Bharat / state

ಭೀಮಾ ತೀರದ ಶೂಟೌಟ್ ಪ್ರಕರಣ: ಮತ್ತೆ ಮೂವರ ಬಂಧನ

ನವೆಂಬರ್ 2ರಂದು ವಿಜಯಪುರದ ಹೊರವಲಯದ ಕನ್ನಾಳ‌ ಕ್ರಾಸ್ ಬಳಿ ಮಹಾದೇವ ಸಾಹುಕಾರ ಹಾಗೂ ಆತನ ಬೆಂಬಲಿಗರನ್ನು ಅಡ್ಡಗಟ್ಟಿ ಗುಂಡಿನ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮತ್ತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಭೀಮಾತೀರದ ಶೂಟೌಟ್ ಪ್ರಕರಣ
ಭೀಮಾತೀರದ ಶೂಟೌಟ್ ಪ್ರಕರಣ

By

Published : Nov 12, 2020, 7:26 PM IST

ವಿಜಯಪುರ:ಭೀಮಾ ತೀರದ ಮಹಾದೇವ ಸಾಹುಕಾರ ಭೈರಗೊಂಡ ಕೊಲೆ ಯತ್ನ ಹಾಗೂ ಆತನ ಅಂಗರಕ್ಷಕ, ಕಾರು ಚಾಲಕನ ಕೊಲೆ ಪ್ರಕರಣಕ್ಕೆ ಬಂಧಿಸಿದಂತೆ ಮತ್ತೆ ಮೂವರನ್ನು ವಿಜಯಪುರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತರನ್ನು ಇಂಡಿ ತಾಲೂಕಿನ ದೇಗಿನಾಳ ಗ್ರಾಮದ ಸಂಘರ್ಷ ಸೂರ್ಯವಂಶಿ, ಉಮರಾಣಿಯ ಸಂಗಪ್ಪ ಯಮದೆ ಹಾಗೂ ವಿಜಯಪುರದ ಜಲನಗರದ ಚೇತನ ಶಿರಶ್ಯಾಡ ಎಂದು ಗುರುತಿಸಲಾಗಿದೆ. ಬಂಧಿತರಿಂದ ಒಂದು ಏರ್​​ಗನ್, ಒಂದು ಬೈಕ್, ಎರಡು ಮೊಬೈಲ್ ವಶಪಡಿಸಿಕೊಳ್ಳಲಾಗಿದೆ.

ಭೀಮಾ ತೀರದ ಶೂಟೌಟ್ ಪ್ರಕರಣ

ನವೆಂಬರ್ 2ರಂದು ವಿಜಯಪುರ ಹೊರ ವಲಯದ ಕನ್ನಾಳ‌ ಕ್ರಾಸ್ ಬಳಿ ಮಹಾದೇವ ಸಾಹುಕಾರ ಹಾಗೂ ಆತನ ಬೆಂಬಲಿಗರನ್ನು ಅಡ್ಡಗಟ್ಟಿ ಗುಂಡಿನ ದಾಳಿ ನಡೆಸಿದ್ದರು. ಇದರಲ್ಲಿ ಸದ್ಯ ಮಹಾದೇವ ಸಾಹುಕಾರ ಭೈರಗೊಂಡ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈತನ ಇಬ್ಬರು ಬೆಂಬಲಿಗರು ಗುಂಡು ತಗುಲಿ ಸಾವನ್ನಪ್ಪಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 16 ಜನರನ್ನು ಬಂಧಿಸಲಾಗಿದೆ. ಈಗ ಬಂಧನಕ್ಕೊಳಗಾಗಿರುವ ಮೂವರು ಸೇರಿ ಬಂಧಿತರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details