ಕರ್ನಾಟಕ

karnataka

ETV Bharat / state

ವಿಜಯಪುರ ಜಿಲ್ಲೆಯಲ್ಲಿ ಇಂದು 61 ಕೊರೊನಾ ಸೋಂಕಿತ ಪ್ರಕರಣ ಪತ್ತೆ... - ವಿಜಯಪುರ

ವಿಜಯಪುರ ಜಿಲ್ಲೆಯಲ್ಲಿ ಇಂದು ಕೊರೊನಾದಿಂದ 73 ಜನ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

Vijayapura
ವಿಜಯಪುರ ಜಿಲ್ಲಾಸ್ಪತ್ರೆ

By

Published : Sep 8, 2020, 10:26 PM IST

ವಿಜಯಪುರ: ಜಿಲ್ಲೆಯಲ್ಲಿ ಇಂದು ಹೊಸದಾಗಿ 61 ಕೊರೊನಾ ಸೋಂಕಿತ ಪ್ರಕರಣಗಳು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 7,450ಕ್ಕೆ ಏರಿಕೆಯಾಗಿದೆ.

ಇಂದು ಕೊರೊನಾದಿಂದ 73 ಜನ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ ಕೊರೊನಾದಿಂದ ಗುಣಮುಖರಾ‌ದವರ ಸಂಖ್ಯೆ 6,710 ಕ್ಕೆ ಏರಿಕೆಯಾಗಿದೆ.

ನಾನಾ ಕಾಯಿಲೆ, ಕೊರೊನಾ ಸೋಂಕಿನಿಂದ ಇಂದು ಇಬ್ಬರು ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಒಟ್ಟು 125ಕ್ಕೆ ಏರಿಕೆಯಾಗಿದೆ. ಮೃತರ ಅಂತ್ಯ ಸಂಸ್ಕಾರವನ್ನು ಶಿಷ್ಟಾಚಾರದಂತೆ ನೆರವೇರಿಸಲಾಗಿದೆ.

ವಿಜಯಪುರ ಜಿಲ್ಲಾಸ್ಪತ್ರೆ, ನಾನಾ ಖಾಸಗಿ ಆಸ್ಪತ್ರೆಗಳಲ್ಲಿ 615 ಜನರಿಗೆ ಚಿಕಿತ್ಸೆ ಮುಂದುವರಿಸಲಾಗಿದೆ. ಇಲ್ಲಿಯವರೆಗೆ 60,646 ಜನರ ಮೇಲೆ ನಿಗಾ ಇಡಲಾಗಿದೆ. 81,204 ಜನರ ಸ್ಯಾಂಪಲ್ ಪಡೆಯಲಾಗಿದೆ. ಇವರಲ್ಲಿ 73,552 ಜನರ ವರದಿ ನೆಗಟಿವ್ ಆಗಿದೆ. 7450 ಜನರಿಗೆ ಪಾಸಿಟಿವ್ ದೃಢಪಟ್ಟಿದೆ. ಇನ್ನೂ 215 ಜನರ ವರದಿ ಬರಬೇಕಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್​ ಕುಮಾರ್ ತಿಳಿಸಿದ್ದಾರೆ.

ABOUT THE AUTHOR

...view details