ಕರ್ನಾಟಕ

karnataka

ETV Bharat / state

ವಿಜಯಪುರ ಲೋಕ ಸಮರ: ಬಿಜೆಪಿ, ಮೈತ್ರಿ ಅಭ್ಯರ್ಥಿಯಿಂದ ನಾಮಪತ್ರ ಸಲ್ಲಿಕೆ - ಲೋಕ ಸಮರ

ವಿಜಯಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಹಾಗೂ ಮೈತ್ರಿ ಅಭ್ಯರ್ಥಿ ಒಂದೇ ದಿನ ನಾಮಪತ್ರ ಸಲ್ಲಿಸಿದರು. ರಮೇಶ್ ಜಿಗಜಿಣಗಿ ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದರೆ, ಮೈತ್ರಿ ಅಭ್ಯರ್ಥಿ ಸುನೀತಾ ಚವ್ಹಾಣ್ ಅವರು ಗೆಲುವಿನ ನಿರೀಕ್ಷೆಯಲ್ಲಿದ್ದಾರೆ.

ಬಿಜೆಪಿ ಮೆರವಣಿಗೆ

By

Published : Apr 3, 2019, 8:05 AM IST

ವಿಜಯಪುರ: ವಿಜಯಪುರ ಲೋಕಸಭಾ ಕ್ಷೇತ್ರದಲ್ಲಿ ಮಂಗಳವಾರ ನಾಮಪತ್ರ ಸಲ್ಲಿಕೆಭರಾಟೆ ಜೋರಾಗಿತ್ತು. ಮೈತ್ರಿ ಸರ್ಕಾರದ ಜೆಡಿಎಸ್ ಅಭ್ಯರ್ಥಿ ಸುನಿತಾ ಚವ್ಹಾಣ್ ಹಾಗೂ ಬಿಜೆಪಿಯ ಅಭ್ಯರ್ಥಿ ರಮೇಶ್ ಜಿಗಜಿಣಗಿ ತಮ್ಮ ಉಮೇದುವಾರಿಕೆ ಸಲ್ಲಿಸಿದ್ರು.

ಮೊದಲುಜೆಡಿಎಸ್ ಅಭ್ಯರ್ಥಿ ಸುನಿತಾ ಚವ್ಹಾಣ ತಮ್ಮ ನಾಮಪತ್ರ ಸಲ್ಲಿಸಿದರು.ನಂತರ ಬಿಜೆಪಿ ಅಭ್ಯರ್ಥಿ ರಮೇಶ್ ಜಿಗಜಿಣಗಿ ಅವರು ಜನಸಾಗರದೊಂದಿಗೆ ಡಿಸಿ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದ್ರು. ಇದಕ್ಕೂ ಮುನ್ನ ನಗರದ ಪ್ರಸಿದ್ಧದೇವಾಲಯ ಸಿದ್ದೇಶ್ವರ ದೇವಸ್ಥಾನದಲ್ಲಿ ಬಿ ಫಾರ್ಮ್​ಗೆವಿಶೇಷ್ ಪೂಜೆ ಸಲ್ಲಿಸಿದರು. ಬಳಿಕ ಅಲ್ಲಿಂದ ತೆರದ ವಾಹನದಲ್ಲಿ ನಗರದ ಪ್ರಮುಖ ವೃತ್ತಗಳಾದ ಗಾಂಧಿಚೌಕ್, ಬಸವೇಶ್ವರ ಸರ್ಕಲ್ ಹಾಗೂ ಅಂಬೇಡ್ಕರ್ ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದರು.

ಬಿಜೆಪಿ ಮೆರವಣಿಗೆ

ಸತತ ಎರಡು ಬಾರಿ ವಿಜಯಪುರ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ರಮೇಶ್ ಜಿಗಜಿಣಗಿ ಅವರಿಗೆ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ, ಮಾಜಿ ಸಚಿವ ಅಪ್ಪು ಪಟಣಶೆಟ್ಟಿ, ಅರುಣ ಶಹಾಪುರ, ಮುಖಂಡ ವಿಜುಗೌಡ್ ಪಾಟೀಲ್, ಜಿಲ್ಲಾಧ್ಯಕ್ಷ ಚಂದ್ರ ಶೇಖರ್ ಕವಟಗಿ, ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಹಾಗೂ ಮುದ್ದೇಬಿಹಾಳ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಸೇರಿದಂತೆ ಹಲವರು ಸಾಥ್ ನೀಡಿದರು.

ಕೊನೆಗೂ ಗೈರಾದ್ರು ನಗರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ..

ರಮೇಶ್ ಜಿಗಜಿಣಗಿ ಅವರ ನಾಮಪತ್ರ ಸಲ್ಲಿಕೆ ವೇಳೆನಗರ ಶಾಸಕ ಬಸವಣಗೌಡ ಪಾಟೀಲ್ ಯತ್ನಾಳಗೈರುಹಾಜರಾಗಿದ್ದರು.

ಮೆರವಣಿಗೆ ಸಂದರ್ಭದಲ್ಲಿ ನಡೆಯಿತು ಕಳ್ಳರ ಕೈಚಳಕ:

ಇನ್ನು ಬಿಜೆಪಿಬೃಹತ್ ಮೆರವಣಿಗೆಯಲ್ಲಿಕಳ್ಳರು ತಮ್ಮ ಕೈಚಳಕತೋರಿಸಿದ್ದಾರೆ. ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಸಾಯಬಣ್ ಹುಳ್ಯಾಳ್ ಅವರ ಜೇಬು ಕತ್ತರಿಸಿಮೊಬೈಲ್ ಕದ್ದು ಪರಾರಿಯಾಗಿದ್ದಾರೆ.

ABOUT THE AUTHOR

...view details