ಮುದ್ದೇಬಿಹಾಳ(ವಿಜಯಪುರ):ತಾಲೂಕಿನ ನಾಗಬೇನಾಳ ಪಿಡಿಒ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದು, ಕೂಡಲೇ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ನಾಗಬೇನಾಳ ಗ್ರಾಮಸ್ಥರು ತಾಲೂಕು ಪಂಚಾಯಿತಿ ಇಒ ಎಸ್.ಜಿ.ಗುರಡ್ಡಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಲಂಚಕ್ಕೆ ಬೇಡಿಕೆ: ನಾಗಬೇನಾಳ ಪಿಡಿಒ ವಿರುದ್ಧ ಕ್ರಮಕ್ಕೆ ಗ್ರಾಮಸ್ಥರ ಆಗ್ರಹ - ವಿಜಯಪುರ ಸುದ್ದಿ
ಮುದ್ದೇಬಿಹಾಳ ತಾಲೂಕಿನ ನಾಗಬೇನಾಳ ಪಿಡಿಒ ರೈತರಿಗೆ ಹಾಗೂ ಬಡ ಕೂಲಿ ಕಾರ್ಮಿಕರಿಗೆ ಪಹಣಿ ಕೊಡಲು 5 ರಿಂದ 10 ಸಾವಿರ ಲಂಚಕ್ಕೆ ಬೇಡಿಕೆ ಇಡುವ ಮೂಲಕ ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಇವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
![ಲಂಚಕ್ಕೆ ಬೇಡಿಕೆ: ನಾಗಬೇನಾಳ ಪಿಡಿಒ ವಿರುದ್ಧ ಕ್ರಮಕ್ಕೆ ಗ್ರಾಮಸ್ಥರ ಆಗ್ರಹ Villagers demand action against Nagabenala PDO](https://etvbharatimages.akamaized.net/etvbharat/prod-images/768-512-8767538-221-8767538-1599833138345.jpg)
ಲಂಚಕ್ಕೆ ಬೇಡಿಕೆ: ನಾಗಬೇನಾಳ ಪಿಡಿಒ ವಿರುದ್ಧ ಕ್ರಮಕ್ಕೆ ಗ್ರಾಮಸ್ಥರ ಆಗ್ರಹ
ಪಿಡಿಒ ವರ್ಗಾವಣೆಯಾಗಿದೆ ಎಂದು ತಮಗೆ ಬೇಕಾದವರಿಗೆ ಸರ್ಕಾರಿ ಜಾಗವನ್ನು ಪರಭಾರೆ ಮಾಡುತ್ತಿದ್ದಾರೆ. ಅಲ್ಲದೇ, ರೈತರಿಗೆ ಹಾಗೂ ಬಡ ಕೂಲಿಕಾರ್ಮಿಕರಿಗೆ ಪಹಣಿ ಕೊಡಲು 5 ರಿಂದ 10 ಸಾವಿರ ಲಂಚಕ್ಕೆ ಬೇಡಿಕೆ ಇಡುವ ಮೂಲಕ ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ.
ತಮಗೆ ಕಂಪ್ಯೂಟರ್ ಆಪರೇಟರ್ ನೇಮಕ ಮಾಡಿಕೊಂಡು ಅವ್ಯವಹಾರ ನಡೆಸುತ್ತಿದ್ದಾರೆ. ಕೂಡಲೇ ಇವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಎರಡು ದಿನಗಳಲ್ಲಿ ಪಂಚಾಯಿತಿ ಕಚೇರಿಯನ್ನು ಮುಚ್ಚಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.