ವಿಜಯಪುರ: ಮಹಿಳೆಯೊಬ್ಬರು ಅನಾರೋಗ್ಯದಿಂದ ಮೃತಪಟ್ಟಿದ್ದು ಕೋವಿಡ್ ಭೀತಿಯ ಕಾರಣ ಸುರಕ್ಷಾ ಕಿಟ್ ಧರಿಸಿಕೊಂಡು ಕುಟುಂಬಸ್ಥರು ಅಂತಿಮ ವಿಧಿವಿಧಾನ ನೆರವೇರಿಸಿದ ಘಟನೆ ಚಡಚಣ ತಾಲೂಕಿನ ಉಮರಜ ಗ್ರಾಮದಲ್ಲಿ ನಡೆದಿದೆ.
ಕೊರೊನಾದಿಂದಲೇ ಮಹಿಳೆ ಮೃತಪಟ್ಟಿದ್ದಾರೆಂದು ಸಂಶಯಗೊಂಡ ಸಂಬಂಧಿಕರು ಮತ್ತು ಗ್ರಾಮಸ್ಥರು ಮಹಿಳೆಯ ಅಂತಿಮ ವಿಧಿವಿಧಾನ ಪೂರೈಸಲು ಹಿಂದೇಟು ಹಾಕಿದ್ದಾರೆ. ಮಹಿಳೆ ಮೃತಪಟ್ಟು 12 ಗಂಟೆಗಳ ಬಳಿಕ ಅಂತ್ಯಸಂಸ್ಕಾರ ಮಾಡಲಾಗಿದೆ.